School Holiday : ಮಂಗಳೂರು : ಜುಲೈ 18ರಂದು ಶಾಲೆ, ಕಾಲೇಜಿಗೆ ರಜೆ : ಆರೆಂಜ್‌ ಅಲರ್ಟ್‌ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು, ಪದವಿ ಪೂರ್ವ ವಸತಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು :  ಕರಾವಳಿ ಜಿಲ್ಲೆಗಳಲ್ಲಿ ಕೆಲವು ದಿನಗಳ ಕಾಲ ಬಿಡುವು ಪಡೆದಿದ್ದ ಮಳೆರಾಯ ಇದೀಗ ಆರ್ಭಟಿಸುತ್ತಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಜುಲೈ 17ರಂದು ಬಾರೀ ಮಳೆ ಸುರಿದಿದೆ. ಅದ್ರಲ್ಲೂ ಜುಲೈ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಆದೇಶದ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಶಾಲೆ, ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಅವರು ರಜೆ (School Holiday ) ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು, ಪದವಿ ಪೂರ್ವ ವಸತಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಕೊರತೆ ಉಂಟಾಗಿದೆ.  ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತರ ಜಿಲ್ಲೆಗಳಿಗೆ ಹೋಲಿಸಿದ್ರೆ ಉತ್ತಮ ಮಳೆ ಸುರಿದಿದೆ. ಈ ಹಿಂದೆ ಮಳೆಯ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರೂ ಕೂಡ ತರಗತಿಗಳನ್ನು ನಡೆಸಿದ ಕಾರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಿಕ್ಷಣ ಸಂಸ್ಥೆಗಳಿಗೆ ನೋಟೀಸ್‌ ಜಾರಿ ಮಾಡಿತ್ತು.

Mangalore Heavy Rain School Holiday july 18 DC Order

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.