ದಕ್ಷಿಣ ಕನ್ನಡ : ಜುಲೈ 25ರಂದು ಶಾಲೆ, ಪ.ಪೂ ಕಾಲೇಜಿಗೆ ರಜೆ ಘೋಷಣೆ

Mangaluru School Holiday : ಮಂಗಳೂರು : ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 25 ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಎಚ್.ವಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಾದಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಎಡಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವ ನದಿಗಳು ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

Also Read : PM Kisan : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ : 20ನೇ ಕಂತು ಯಾವಾಗ ಬಿಡುಗಡೆ ?

ಪದವಿ ಕಾಲೇಜುಗಳು ಮತ್ತು ಇತರೆ ವೃತ್ತಿಪರ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ. ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಬರದಂತೆ ಮತ್ತು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.

Mangaluru School Holiday : ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.

ಜುಲೈ 24ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ITI ಗಳಿಗೆ ರಜೆ ಘೋಷಿಸಲಾಗಿತ್ತು.

ಕಳೆದ ಕೆಲವು ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳ ಕಾಲವೂ ಈ ಮಳೆ ಮುಂದುವರಿಯುವ ಸಾಧ್ಯತೆಯಿದೆ.

Also Read : ಕರಾವಳಿಯ ಪ್ರತಿಷ್ಠಿತ ಕೋ-ಅಪರೇಟಿವ್‌ ಬ್ಯಾಂಕ್‌ ಲೈಸೆನ್ಸ್‌ ರದ್ದು ಮಾಡಿದ RBI

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ “ಅತ್ಯಂತ ಭಾರೀ ಮಳೆ” (Extremely Heavy Rain) ಸುರಿಯುವ ಸಾಧ್ಯತೆ ಇದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories