ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ 24 ಹಸುಗಳ ರಕ್ಷಣೆ
Mangaluru News | Mangalore News | cow illegal transportation: ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದವರ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಮಂಗಳೂರಿನ ಕದ್ರಿ ಠಾಣಾ ಪೊಲೀಸರು ದಾಳಿ ನಡೆಸಿ 34 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ.
ಜಾನುವಾರು ಸಾಗಾಟ ಮಾಡುತ್ತಿದ್ದವರ ಬಗ್ಗೆ ಕದ್ರಿ ಪೊಲೀಸರು ಖಚಿತ ಮಾಹಿತಿ ಪಡೆದುಕೊಂಡಿದ್ದರು. ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಜಾನುವಾರುಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಈ ಎಲ್ಲಾ ಹಸುಗಳನ್ನು ಕೇರಳದ ಕಸಾಯಿಖಾನೆಗೆ ಸಾಗಿಸಲು ಆರೋಪಿಗಳು ಪ್ಲಾನ್ ಮಾಡಿದ್ದರು ಎನ್ನಲಾಗಿದೆ.
ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಮತ್ತಷ್ಟು ಸುಲಭ; ಆನ್ಲೈನ್ನಲ್ಲೇ ಸಿಗಲಿದೆ ಮಾಹಿತಿ
ಈ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೈಸೂರಿನ ದಸ್ತಗೀರ ಸಾಬ್, ಖತೀಫ್ ಪಾಷಾ, ಅಯೂಬ್ ಖಾನ್ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದಿಂದ ಕೇರಳದ ಹೊಸಂಗಡಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದರು ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಈ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



