*ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ*ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ: ತೂಗು ಸೇತುವೆಗಳ ಸರದಾರ ಸುಳ್ಯದಲ್ಲಿ ಕೊನೆಯುಸಿರು
padmashree girish bharadwaj passed away : ಕರಾವಳಿ ಭಾಗದಲ್ಲಿ ನಿರ್ಮಾಣಗೊಂಡ ಮೂಲದ ತೂಗು ಸೇತುವೆ ಇದಾಗಿತ್ತು. ನಂತರ ಸರಕಾರದ ಹಣವನ್ನು ಬಳಸಿಕೊಂಡು, ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತೂಗು ಸೇತುವೆ ನಿರ್ಮಾಣ ಕಾರ್ಯದಲ್ಲಿ ಡಾ.ಗಿರೀಶ್ ಭಾರದ್ವಾಜ್ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು.

padmashree girish bharadwaj passed away: ಸುಳ್ಯ ( mangaluru) : ಭಾರತ ದೇಶದಲ್ಲಿ ನೂರಾರು ತೂಗು ಸೇತುವೆಗಳನ್ನು ನಿರ್ಮಾಣ ಮಾಡಿ, ಗ್ರಾಮೀಣ ಭಾಗದ ಜನರಿಗೆ ಸಂಪರ್ಕ ಕಲ್ಪಿಸಿದ್ದ ‘ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ’ ಖ್ಯಾತಿಯ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ (76 ವರ್ಷ) ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತದ್ದ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 1950ರಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಬಳಿಕ ತಂದೆಯ ಜೊತೆಯಲ್ಲಿ ವರ್ಕ್ ಶಾಪ್ ಆರಂಭಿಸಿದ್ದರು. ಆದರೆ ಗ್ರಾಮೀಣ ಭಾಗದ ಜನರು ಮಳೆಗಾಲದಲ್ಲಿ ರಸ್ತೆ ದಾಟುವುದಕ್ಕೆ ಪರಾಡುತ್ತಿರುವುದನ್ನು ಗಮಿಸಿದ ಗಿರೀಶ್ ಭಾರಧ್ವಾಜ್ ಅವರು 1989ರಲ್ಲಿ ಮೊದಲ ಬಾರಿಗೆ ಸುಳ್ಯದ ಅರಂಬೂರಿನಲ್ಲಿರುವ ಪಯಸ್ವಿನಿ ನದಿಗೆ ಕಡಿಮೆ ವೆಚ್ಚದಲ್ಲಿ ತೂಗು ಸೇವೆಯನ್ನು ನಿರ್ಮಾಣ ಮಾಡಿದ್ದರು.
ಕರಾವಳಿ ಭಾಗದಲ್ಲಿ ನಿರ್ಮಾಣಗೊಂಡ ಮೂಲದ ತೂಗು ಸೇತುವೆ ಇದಾಗಿತ್ತು. ನಂತರ ಸರಕಾರದ ಹಣವನ್ನು ಬಳಸಿಕೊಂಡು, ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತೂಗು ಸೇತುವೆ ನಿರ್ಮಾಣ ಕಾರ್ಯದಲ್ಲಿ ಡಾ.ಗಿರೀಶ್ ಭಾರದ್ವಾಜ್ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ಗಿರೀಶ್ ಭಾರದ್ವಾಜ್ ಅವರು ನೂರಕ್ಕೂ ಅಧಿಕ ತೂಗು ಸೇತುವೆಗಳನ್ನು ಇದುವರೆಗೆ ನಿರ್ಮಾಣ ಮಾಡಿದ್ದಾರೆ.
ಕರ್ನಾಟಕ ಮಾತ್ರವಲ್ಲದೇ ತೆಲಂಗಾಣ, ಆಂಧ್ರಪ್ರದೇಶ, ಒಡಿಶಾ ರಾಜ್ಯಗಳಲ್ಲಿ ಅತೀ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಾಣ ಮಾಡಿದ ಖ್ಯಾತ ಗಿರೀಶ್ ಭಾರದ್ವಾಜ್ ಅವರಿಗೆ ಸಲ್ಲುತ್ತದೆ. ಯಾವುದೇ ಲಾಭದ ಆಸೆ ಇಲ್ಲದೇ ಸಮಾಜ ಸೇವೆಯನ್ನೇ ಗುರಿಯಾಗಿಟ್ಟುಕೊಂಡು ಗ್ರಾಮೀಣ ಭಾಗದ ಜನತೆಗೆ ಅವರು ಮಾಡಿದ ಸೇವೆಯನ್ನು ಪರಿಗಣಿಸಿ ಭಾರತ ಸರಕಾರ 2017ರಲ್ಲಿ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿರುವ ಪ್ರದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ಅಲ್ಲದೇ ಡಾ.ಗಿರೀಶ್ ಭಾರದ್ವಾಜ್ ಅವರ ಸಾಧನೆಯನ್ನು ಗುರುತಿಸಿ ಡ್ವಾಕ್ಟರೇಟ್ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ಪ್ರಶಸ್ತಿಗಳು ಇವರ ಮುಡಿಗೇರಿದೆ. ಗಿರೀಶ್ ಭಾರದ್ವಾಜ್ ಅವರ ನಿಧನದಿಂದಾಗಿ ದೇಶದ ಎಂಜಿನಿಯರಿಂಗ್ ಕ್ಷೇತ್ರ ಹಾಗೂ ಗ್ರಾಮೀಣ ಭಾರತದ ಹಳ್ಳಿಗಳನ್ನು ಜೋಡಿಸುತ್ತಿದ್ದ ಭದ್ರವಾದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಹಾಗೂ ಅಂತ್ಯಕ್ರಿಯೆ ಸುಳ್ಯದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
padmashree girish bharadwaj passed away bridge man of india death sullia

