ಬೆಳ್ತಂಗಡಿ: ಆಂಬುಲೆನ್ಸ್​ನಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ ಗರ್ಭಿಣಿ!

Belthangady News | Mangaluru News: ಮಂಗಳೂರು: ಆಂಬುಲೆನ್ಸ್​ನಲ್ಲಿಯೇ ಗರ್ಭಿಣಿಯು ಗಂಡು ಮಗುವಿಗೆ ಜನ್ಮ ನೀಡಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿಯಲ್ಲಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ನಿವಾಸಿ ಲೀಲಾವತಿ ಎಂಬವರು ಆಂಬುಲೆನ್ಸ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ.

ಇಂದು ಬೆಳಗ್ಗಿನ ಜಾವ ಹೆರಿಗೆಗೆಂದು ಲೀಲಾವತಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಲೀಲಾವತಿ ಅವರನ್ನು ಮಂಗಳೂರಿನ ಲೇಡಿಗೋಷನ್​ ಆಸ್ಪತ್ರೆಗೆ ಕಳಿಸಲು ವ್ಯವಸ್ಥೆ ಮಾಡಲಾಗಿತ್ತು. ಆಂಬುಲೆನ್ಸ್​ನಲ್ಲಿ ನರ್ಸ್​ಗಳ ಜೊತೆಯಲ್ಲಿ ಲೀಲಾವತಿ ತೆರಳುತ್ತಿದ್ದ ಸಂದರ್ಭದಲ್ಲಿಯೇ ಮಾರ್ಗಮಧ್ಯದಲ್ಲಿಯೇ ಹೆರಿಗೆ ನೋವು ಜೋರಾಗಿತ್ತು.

ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಮತ್ತಷ್ಟು ಸುಲಭ; ಆನ್​ಲೈನ್​ನಲ್ಲೇ ಸಿಗಲಿದೆ ಮಾಹಿತಿ

ಬಳಿಕ ಸಿಸ್ಟರ್​ಗಳಾದ ಕುಮುದಾ ಹಾಗೂ ಸೌಮ್ಯಾ ಅವರು ಆಂಬುಲೆನ್ಸ್​ನಲ್ಲಿಯೇ ಲೀಲಾವತಿಗೆ ಹೆರಿಗೆ ಪ್ರಕ್ರಿಯೆ ಆರಂಭಿಸಿದ್ದಾರೆ. ಆಂಬುಲೆನ್ಸ್​ ಫರಂಗಿಪೇಟೆ ತಲುಪುವ ವೇಳೆಗೆ ಲೀಲಾವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಅವರನ್ನು ಲೇಡಿ ಗೋಷನ್​ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories