Red alert School Holiday : ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ, ದ.ಕ ಡಿಸಿ ಆದೇಶ
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 6ರ ವರೆಗೂ ಕೂಡ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಂಗಳೂರು ( Mangalore) : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯೂ ( ಜುಲೈ 3) ಯ ಆರ್ಭಟ ಮುಂದುವರಿಯಲಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ, ಪ್ರೌಢಶಾಲೆ ಜೊತೆಗೆ ವಸತಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಮೂರು ದಿನಗಳಿಂದಲೂ ಕರಾವಳಿ ಜಿಲ್ಲೆಯಲ್ಲಿ ಬಾರೀ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜುಲೈ 2 ರಂದು ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿತ್ತು. ಇದೀಗ ನಾಳೆಯೂ ಕೂಡ ಶಾಲೆ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 6ರ ವರೆಗೂ ಕೂಡ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕಳೆದ ಒಂದು ತಿಂಗಳ ಕಾಲ ಬಿಡುವು ಪಡೆದಿದ್ದ ಮಳೆ ಇದೀಗ ಆರ್ಭಟಿಸುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾಣ ಇಲಾಖೆ ತಿಳಿಸಿದೆ.
Red alert: Holiday declared for schools, PU colleges in Dakshina Kannada on July 3

