School Holiday : ಬಾರೀ ಮಳೆ, ಇಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ( Red Alert) ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ( ಜುಲೈ 23) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜಿಗಳಿಗೆ ರಜೆ ( School Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮಂಗಳೂರು ( Mangalore) : ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ( IMD) ಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ( Red Alert) ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ( ಜುಲೈ 23) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜಿಗಳಿಗೆ ರಜೆ ( School Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಇದರಲ್ಲಿ ಪ್ರೌಢಶಾಲಾ ವಸತಿ ಶಾಲೆ ಮತ್ತು ಪದವಿ ಪೂರ್ವ ವಸತಿ ಶಾಲೆಗಳು ಒಳಗೊಂಡಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 200 ಮಿಲಿ ಮೀಟರ್ ಮಳೆ
ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಸೂಚನೆಯ ಪ್ರಕಾರ ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಸುರಿಯಲಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿಯೇ ಕನಿಷ್ಠ 115 ಮಿಲಿ ಮೀಟರ್‌ನಿಂದ 200 ಮಿಲಿ ಮೀಟರ್ ವರೆಗೆ ಮಳೆಯಾಗಲಿದೆ ಎಂದು ತಿಳಿದೆ.
ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ
ಇಂದು ಮಳೆಯ ಆರ್ಭಟ ಜೋರಾಗಿ ಇರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಆದರೆ ಮಕ್ಕಳು ಯಾವುದೇ ಕಾರಣಕ್ಕೂ ನದಿ, ಸಮುದ್ರ ತೀರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆಯೂ ತಿಳಿಸಲಾಗಿದೆ. ಜಿಲ್ಲಾಮಟ್ಟದಲ್ಲಿರುವ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು, ಕಡ್ಡಾಯವಾಗಿ ಕರ್ತವ್ಯವನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
School Bus Accident : ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿ ಸಾವು
ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ಆಂಗ್ಲಮಾಧ್ಯಮ ಶಾಲೆಯ ಬಸ್ಸಿನ ಮೇಲೆ ನಿನ್ನೆ ಸಂಜೆ ಮರವೊಂದು ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
School Hoilday Heavy Rain Red Alert IMD Dakshina Kannada

