ಮಂಗಳೂರು : ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು ಹೊರವಲಯದ ಸುರತ್ಕಲ್‌ನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಈಕೆ ಎಂಬಿಬಿಎಸ್‌ ಪದವಿಯನ್ನು ಪಡೆಯುತ್ತಿದ್ದಳು. ತನ್ನ ಸ್ನೇಹಿತೆಯ ಜೊತೆಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಈಕೆ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಂಗಳೂರು : ಅಪಾರ್ಟ್‌ಮೆಂಟ್‌ವೊಂದರ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್‌ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರಲವುದ ಮುಕ್ಕದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ ಎಂಬಾಕೆಯೇ ಮೃತ ದುರ್ದೈವಿ.

ಮಂಗಳೂರು ಹೊರವಲಯದ ಸುರತ್ಕಲ್‌ನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಈಕೆ ಎಂಬಿಬಿಎಸ್‌ ಪದವಿಯನ್ನು ಪಡೆಯುತ್ತಿದ್ದಳು. ತನ್ನ ಸ್ನೇಹಿತೆಯ ಜೊತೆಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಈಕೆ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಎಂಬಿಬಿಎಸ್‌ ವಿದ್ಯಾರ್ಥಿನಿ ಮಹಾಲಕ್ಷ್ಮೀ ಖಿನ್ನತೆಗೆ ಒಳಗಾಗಿದ್ದು, ಇದೇ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಸುರತ್ಕಲ್‌ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Surthkal Mukka mbbs student suicide falls from apartment

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »