ಬೆಂಗಳೂರು : Indira Canteens : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ತಮ್ಮ ಹಳೆಯ ಯೋಜನೆಯನ್ನು ಪುನರ್ ಆರಂಭಿಸಲು ಮುಂದಾಗಿದೆ. ಬಡವರು ಹಾಗೂ ಮಧ್ಯಮ ವರ್ಗದವರ ಹಸಿವು ನೀಗುವ ನಿಟ್ಟಿನಲ್ಲಿ ಆರಂಭಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಯೋಜನ ನೆನಗುದಿಗೆ ಬಿದ್ದಿತ್ತು. ಇದೀಗ ಕಾಂಗ್ರೆಸ್ ಸರಕಾರ ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರರಾಂಭಿಸಲು ಮುಂದಾಗಿದೆ.
ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪುನರ್ ಆರಂಭಿಸುವ ನಿಟ್ಟಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು 2017 ರಲ್ಲಿ ಆರಂಭಗೊಂಡಿದ್ದ ಇಂದಿರಾ ಕ್ಯಾಂಟೀನ್‌ಗಳು ರಾಜ್ಯದಾದ್ಯಂತ ಅತ್ಯಂತ ಜನಪ್ರಿಯವಾಗಿದ್ದವು. ಇಂದಿರಾ ಕ್ಯಾಂಟೀನ್ ಕುರಿತು ಭ್ರಷ್ಟಾಚಾರದ ಕುರಿತು ಆರೋಪವೂ ಕೇಳಿಬಂದಿತ್ತು. ಇಂದಿರಾ ಕ್ಯಾಂಟೀನ್ ನೀಡುವ ಗ್ರಾಹಕರ ಲೆಕ್ಕದ ವಿಚಾರದಲ್ಲೂ ಆರೋಪ ಕೇಳಿಬಂದಿತ್ತ. ಆದರೂ ಕೂಡ 2019 ರ ವರೆಗೆ ಇಂದಿರಾ ಕ್ಯಾಂಟೀನ್‌ಗಳು ಯಶಸ್ವಿಯಾಗಿಯೇ ಕಾರ್ಯನಿರ್ವಹಿಸಿದ್ದವು. ಆದರೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಂದಿರಾ ಕ್ಯಾಂಟೀನ್ ಮುಚ್ಚುವ ನಿರ್ಧಾರ ಕೈಗೊಂಡಿತ್ತು. ಇಂದಿರಾ ಕ್ಯಾಂಟೀನ್ ಬದಲು ಬೆಂಗಳೂರಿನ ಪ್ರತೀ ವಾರ್ಡ್‌ಗಳಲ್ಲಿಯೂ ಅಟಲ್ ಆಹಾರ ಕೇಂದ್ರ ತೆರೆಯುವುದಾಗಿ ಆಶ್ವಾಸನೆಯನ್ನು ನೀಡಿತ್ತು. ಆದ್ರೆ ಇದೀಗ ಕಾಂಗ್ರೆಸ್ ಸರಕಾರ ತಾವು ಆರಂಭಿಸಿದ್ದ ಯೋಜನೆಯನ್ನೇ ಮತ್ತೆ ಪುನರಾರಂಭಿಸಲು ಸಜ್ಜಾಗಿದೆ.
ಇದನ್ನೂ ಓದಿ : Udupi Traffic Jam : ಕಲ್ಸಂಕದಲ್ಲಿ ಖಾಸಗಿ ಬಸ್ಸುಗಳಿಂದ ಟ್ರಾಫಿಕ್ ಜಾಮ್ : ತುರ್ತು ಕ್ರಮಕ್ಕೆ ಆಗ್ರಹ
ಇದನ್ನೂ ಓದಿ : ಬಿಜೆಪಿ ಕಾಂಗ್ರೆಸ್ ಜಗಳಕ್ಕೆ ಬಡವಾದ ಮಕ್ಕಳು : ಶಾಲಾರಂಭದ ಹೊತ್ತಲ್ಲೇ ಪಠ್ಯ ಬದಲಾವಣೆ ಶಾಕ್
250 Indira Canteens Starts in Bangalore CM Siddaramaiah