abvp protest in bangalore university : ಪ್ರತಿಭಟನಾನಿರತ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ಬೆಂಗಳೂರು : abvp protest in bangalore university : ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿಶ್ವವಿದ್ಯಾಲಯದ ಆವರಣದ ಎದುರು ಧರಣಿ ನಿರತರಾಗಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ. ಪೊಲೀಸರ ಲಾಠಿ ಚಾರ್ಜ್​ ವೇಳೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪರೀಕ್ಷೆಯ ಮೌಲ್ಯಮಾಪನ ಹಾಗೂ ಫಲಿತಾಂಶದ ವಿಚಾರದಲ್ಲಿ ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.


ಪ್ರತ್ಯೇಕ ಕಾರಣಗಳಿಗೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಹಾಗೂ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಗಲಾಟೆ ಏರ್ಪಟ್ಟಿತ್ತು. ಪ್ರತಿಭಟನೆಯ ವೇಳೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆಯಲ್ಲಿ ಪೊಲೀಸರು ಲಾಠಿ ಬೀಸಿದ್ದಾರೆ ಎನ್ನಲಾಗಿದೆ.


ಪರೀಕ್ಷಾ ಮೌಲ್ಯಮಾಪನ, ಫಲಿತಾಂಶ ವಿಳಂಬ, ಮಾರ್ಕ್ಸ್​ ಕಾರ್ಡ್​ ಸಮಸ್ಯೆ, ಹಾಸ್ಟೆಲ್​ ಸಮಸ್ಯೆ , ವಿದ್ಯಾರ್ಥಿ ವೇತನ ಸಮಸ್ಯೆ ಹೀಗೆ ನಾನಾ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರು. ಇತ್ತ ರಾಯಚೂರಿನಲ್ಲಿ ಅಂಬೇಡ್ಕರ್​​ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯ ಮಧ್ಯೆ ವಿದ್ಯಾರ್ಥಿ ಸಂಘಟನೆಯ ನಡುವೆಯೇ ಮಾರಾಮಾರಿ ಉಂಟಾಗಿದೆ.


ಶೈಕ್ಷಣಿಕ ಸಮಸ್ಯೆಗಳು ಇರುವುದು ಮಾಮೂಲಿ. ಆದರೆ ಅಂಬೇಡ್ಕರ್​ಗೆ ಅವಮಾನವಾಗಿದೆ ಅಂದರೆ ಅದು ದೇಶದ ವಿಚಾರ. ಫಲಿತಾಂಶ ತಡವಾಗಿ ಬಂದರೆ ಅದೇನು ದೊಡ್ಡ ಸಮಸ್ಯೆಯಲ್ಲ. ಹೀಗಾಗಿ ಇಂದು ನಾವು ಪ್ರತಿಭಟನೆ ಮಾಡುತ್ತೇವೆ. ನಾಳೆ ನೀವು ಮಾಡಿ ಎಂದು ಸಂಶೋಧನಾ ವಿದ್ಯಾರ್ಥಿಗಳು ಎಬಿವಿಪಿ ಕಾರ್ಯಕರ್ತರಿಗೆ ಹೇಳಿದ್ದಾರೆ. ಮಾತಿಗೆ ಮಾತು ಬೆಳೆದು ಎರಡೂ ಸಂಘಟನೆಗಳ ನಡುವೆ ಮಾರಾಮಾರಿ ಏರ್ಪಟ್ಟಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಬೀಸಿದ್ದಾರೆ.


ಪ್ರತಿಭಟನೆ ನಡೆಸಲು ಎರಡೂ ಕಡೆಗ ವಿದ್ಯಾರ್ಥಿಗಳು ಅನುಮತಿ ಪಡೆದಿರಲಿಲ್ಲ. ಬಿಕಾಂ ಅಂಕಪಟ್ಟಿ ವಿಚಾರವಾಗಿ ಪ್ರತಿಭಟನೆ ನಡೆಸಲು ಎಬಿವಿಪಿ ಕಾರ್ಯಕರ್ತರು ಮುಂದಾಗಿದ್ದರು. ಆದರೆ ಇದಕ್ಕೆ ಪೊಲೀಸರು ನಿನ್ನೆ ಅನುಮತಿ ನಿರಾಕರಿಸಿದ್ದರು. ಆದರೂ ಕೂಡ ಇಂದು ಎಬಿವಿಪಿ ವಿದ್ಯಾರ್ಥಿಗಳು ವಿವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜ್ಞಾನ ಭಾರತಿ ಠಾಣೆ ಪೊಲೀಸರು ಬೀಸಿದ ಲಾಠಿಗೆ ವಿದ್ಯಾರ್ಥಿನಿ ಹೇಮಶ್ರೀ ಎಂಬವರ ತಲೆಗೆ ಗಂಭೀರ ಪೆಟ್ಟು ತಗುಲಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹೊಲಿಗೆ ಹಾಕಲಾಗಿದ್ದೆ. ಹೇಮಶ್ರೀ ಅಖಿಲ ಭಾರತ ವಿದ್ಯಾರ್ಥಿ ಪರಿಷತ್​​ನ ಸದಸ್ಯೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : Gungun Upadhyay : ಹೋಟೆಲ್‌ನ 6ನೇ ಮಹಡಿಯಿಂದ ಜಿಗಿದು ಖ್ಯಾತ ಮಾಡೆಲ್‌ ಗುಂಗುನ್‌ ಉಪಾಧ್ಯಾಯ ಆತ್ಮಹತ್ಯೆ ಯತ್ನ

ಇದನ್ನೂ ಓದಿ : Badava Rascal : ಕನ್ನಡದ ಬಳಿಕ ತೆಲುಗಿಗೆ ಬಡವ ರಾಸ್ಕಲ್ : ಡಾಲಿ ಧನಂಜಯ್ ಸಿನಿಮಾ ಪೋಸ್ಟರ್ ರಿಲೀಸ್

abvp protest in bangalore university lathi charge by police and many injured

Comments are closed.