ACB Raid : ಬಿಡಿಎ ಭ್ರಷ್ಟಾಚಾರ : ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಎಸಿಬಿ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ (ACB Raid ) ಮುಟ್ಟಿಸಿದ್ದಾರೆ. ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಯ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ 9 ಕಡೆ ನೂರಕ್ಕೂ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನೆಸಿದ್ದಾರೆ.

ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರಮದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಬಿಡಿಎ ಅಧಿಕಾರಿಗಳ ಮನೆಗಳ ಮೇಲೆ ದಾಳಿಯನ್ನು ನಡೆಸಿದ್ದರು. ಈ ವೇಳೆಯಲ್ಲಿ ಸಿಕ್ಕ ದಾಖಲೆಗಳ ಆಧಾರದ ಮೇಲೆ ಈ ದಾಳಿಯನ್ನು ನಡೆಸಲಾಗಿದೆ. ಇದೀಗ ಬಿಡಿಎನ ಒಟ್ಟು ೯ ಮಧ್ಯವರ್ತಿಗಳ ಮನೆಗಳ ಮೇಲೆ ದಾಳಿ ನಡೆದಿದೆ.

ಮುದ್ದಿನಪಾಳ್ಯದ ಅಶ್ವತ್ಥ್‌, ಚಿಕ್ಕ ಹನುಮಯ್ಯ, ಚಾಮರಾಜಪೇಟೆಯ ಬಿ.ಎನ್.ರಘು, ಆರ್‌.ಟಿ.ನಗರದ ಮನೋರಾಯನಪಾಳ್ಯದ ಮೋಹನ್‌, ದೊಮ್ಮಲೂರಿನ ಮನೋಜ್‌, ಆರ್‌ಆರ್‌ ನಗರದ ತೇಜು, ಬಿಡಿಎ ಲೇಔಟ್‌ನ ಲಕ್ಷ್ಮಣ ಎಂಬವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಗೋಮಾಳದ ಜಮೀನನ್ನು ರೈತರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕಾರಿಗಳ ಜೊತೆ ಸೇರಿ ಮಾರಾಟ ಮಾಡಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಕಳೆದ ಐದು ಗಂಟೆಗಳಿಂದಲೂ ಅಧಿಕಾರಿಗಳು ಕಡತಗಳ ಪರಿಶೀಲನೆ ಕಾರ್ಯವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : 133 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೋಯಿಂಗ್ 737 ವಿಮಾನ ಪತನ

ಇದನ್ನೂ ಓದಿ : ಸಿಲಿಕಾನ್ ಸಿಟಿಗೆ ಮತ್ತೆ ಟ್ರಾಫಿಕ್ ಸಂಕಷ್ಟ: ಉಸಿರಾಡಲು ಯೋಗ್ಯವಲ್ಲ ನಗರದ ಗಾಳಿ

( ACB Raid on 9 Places of Bangalore in Early Morning)

Comments are closed.