Aero India 2023 :ಫೆಬ್ರವರಿ 13 ರಿಂದ ಏರೋ ಇಂಡಿಯಾ 2023: ಮಾಂಸಾಹಾರ ನಿಷೇಧಿಸಿದ ಬಿಬಿಎಂಪಿ

ಬೆಂಗಳೂರು: ಏರೋ ಇಂಡಿಯಾ 2023 (Aero India 2023 ) ಇದೇ ಫೆಬ್ರವರಿ 13 ರಿಂದ 17ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ವಿಮಾನಯಾನ ನಡೆಸಲು ಉದ್ದೇಶಿಸಿರುವ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಾಯುಪಡೆ ನಿಲ್ದಾಣದ ಸುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಅಥವಾ ಮೀನು ಮಾರಾಟವನ್ನು ನಿಷೇಧಿಸಿದೆ. .

ಜನವರಿ 30 2023 ರಿಂದ ಫೆಬ್ರವರಿ 20 2023 ರವರೆಗೆ ಯಲಹಂಕ ವಾಯುಪಡೆ ನಿಲ್ದಾಣದ 10 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರಿ ಆಹಾರ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಮಾಂಸದ ಅಂಗಡಿಗಳು ಮತ್ತು ಮಾಂಸಾಹಾರಿ ರೆಸ್ಟೋರೆಂಟ್‌ಗಳ ಮಾಲೀಕರಿಗೆ ಬಿಬಿಎಂಪಿ ಈಗಾಗಲೇ ಸೂಚನೆಯನ್ನು ಸಾರ್ವಜನಿಕರಿಗೆ ನೀಡಿದೆ. ಆದರೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಸಾಕಷ್ಟು ಗೊಂದಲಗಳಿದ್ದು, ಅಧಿಕಾರಿಗಳು ಇದೀಗ ಮಾಂಸಾಹಾರ ಮಾರಾಟ ಮತ್ತು ಸೇವನೆಯಲ್ಲಿ ಕೆಲವು ನಿಯಮಗಳನ್ನು ಮಾರ್ಪಡಿಸಿ ಹೊಸ ಆದೇಶವನ್ನು ಹೊರಡಿಸಿದ್ದಾರೆ.

ಏರೋ ಇಂಡಿಯಾ ಶೋ ನಡೆಯುವ ವೇಳೆಯಲ್ಲಿ ಸುರಕ್ಷತೆಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಪ್ರಮುಖವಾಗಿ ಏರ್‌ಫೀಲ್ಡ್ ಪ್ರದೇಶದ ಸುತ್ತಮುತ್ತಲೂ ಪಕ್ಷಿಗಳ ಚಟುವಟಿಕೆಯನ್ನು ತಗ್ಗಿಸುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಒಂದೊಮ್ಮೆ ಮಾಂಸಾಹಾರ ಸೇವನೆ ಹಾಗೂ ಮಾರಾಟಕ್ಕೆ ಅವಕಾಶವನ್ನು ನೀಡಿದ್ರೆ, ಹಕ್ಕಿಗಳ ಚಲನವಲನ ಈ ಪ್ರದೇಶಗಳಲ್ಲಿ ಕಂಡು ಬರುತ್ತಿದ್ದು, ಇದರಿಂದಾಗಿ ಸುರಕ್ಷತೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತ್ಯಾಜ್ಯ ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ತಪಾಸಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಾರಿಯ ಏರ್‌ ಶೋನಲ್ಲಿ ಮೇಕ್‌ ಇಂಡಿಯಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಾಯುಯಾನಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಶೋ ಆಯೋಜಿಸಲಾಗುತ್ತಿದೆ. ಕೋವಿಡ್‌ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದಲೂ ಏರೋ ಇಂಡಿಯಾ ಶೋ ಕಳೆಗಟ್ಟಿತ್ತು. ಆದರೆ ಈ ಬಾರಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಏರೋ ವೀಕ್ಷಣೆ ಮಾಡಲಿದ್ದಾರೆ. ಕಳೆದ ವರ್ಷ 55 ದೇಶಗಳ ಪ್ರತಿನಿಧಿಗಳು ಮತ್ತು 540 ಕ್ಕೂ ಹೆಚ್ಚು ಪ್ರದರ್ಶಕರು ಏರ್‌ ಶೋನಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : Inhuman incident in Bangalore: ಬೆಂಗಳೂರಿನಲ್ಲಿ ಅಮಾನವೀಯ ಘಟನೆ : ವ್ಯಕ್ತಿಯನ್ನು ರಸ್ತೆಯಲ್ಲಿ ಎಳೆದೊಯ್ದ ಬೈಕ್ ಸವಾರ

ಇದನ್ನೂ ಓದಿ : Road crash in bengaluru: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಮತ್ತೊಂದು ಸಾಕ್ಷಿ : ಬೆಂಗಳೂರಲ್ಲಿ ಕುಸಿಯಿತು ರಸ್ತೆ

Aero India 2023 Non-Veg Food Consumption Is not Permitted BBMP Bangaluru Check Details

Comments are closed.