ಎಚ್ಚರ…ಎಚ್ಚರ.. ಎಚ್ಚರ : ಒಂದೇ ತಿಂಗಳಲ್ಲಿ ಬೆಂಗಳೂರಿನ 472 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ಸಿಲಿಕಾನ್ ಸಿಟಿಯನ್ನು ತತ್ತರಿಸುವಂತೆ ಮಾಡಿದೆ. ಶಾಲೆಗಳಿಗೆ ರಜೆ ನೀಡುವ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ನಡುವಲ್ಲೇ ಶಾಕಿಂಗ್ ವಿಚಾರವೊಂದು ಹೊರಬಿದ್ದಿದ್ದು, ಮಾರ್ಚ್ ತಿಂಗಳಲ್ಲಿ ಬೆಂಗಳೂರಿನ 472 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಜನವರಿ ತಿಂಗಳಿನಿಂದ ಶಾಲೆಗಳು ಪುನರಾರಂಭಗೊಂಡಿವೆ. ಆದರೆ ಮಾರ್ಚ್ ತಿಂಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 472 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೇವಲ ಮಾರ್ಚ್ ತಿಂಗಳ ಅಂಕಿ ಅಂಶಗಳನ್ನು ಅವಲಕೋಕಿಸಿದ್ರೆ ಇದುವರೆಗೆ ಒಟ್ಟು 244 ಬಾಲಕರು ಮತ್ತು 228 ಬಾಲಕಿಯರು ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಶಾಲೆಗಳು ಆರಂಭವಾದ ನಂತರದಲ್ಲಿ ವಿದ್ಯಾರ್ಥಿಗಳು ಒಳಾಂಗಣ ಹಾಗೂ ಹೊರಾಂಗಣ ಚಟುವಟಿಕೆಯಲ್ಲಿಯೇ ಭಾಗಿಯಾಗುತ್ತಿದ್ದಾರೆ. ಅಲ್ಲದೇ ಶಾಲೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡುವುದು ಕೂಡ ಕಷ್ಟಕರವಾಗುತ್ತಿದೆ. ಹೀಗಾಗಿಯೇ ಸೋಂಕಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

https://kannada.newsnext.live/maharashtra-lockdown-cm-meeting-covid-technical-experts/

ವಿದ್ಯಾರ್ಥಿಗಳಿಗೆ ಒಂದೆಡೆ ಶಾಲೆಗಳಿಂದಲೇ ಸೋಂಕು ಹರಡುತ್ತಿದ್ದರೆ, ಇನ್ನೊಂದೆಡೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಂದಲೂ ಸೋಂಕು ಹರಡಿರುವ ಸಾಧ್ಯತೆಯಿದೆ. ವಿದ್ಯಾರ್ಥಿ ಪೋಷಕರ ಮೂಲಕ ಕೊರೊನಾ ಸೋಂಕು ಶಾಲೆಗಳಿಗೂ ವ್ಯಾಪಿಸಿರೋ ಸಾಧ್ಯತೆಯಿದೆ. ಹೀಗಾಗಿಯೇ ಕೋವಿಡ್ ತಾಂತ್ರಿಕ ಸಮಿತಿ ಪಬ್ಲಿಕ್ ಪರೀಕ್ಷೆಯನ್ನು ಹೊಂದಿರುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡುವಂತೆಯೂ ಶಿಕ್ಷಣ ಇಲಾಖೆಗೆ ಸೂಚಿಸಿದೆ.

https://kannada.newsnext.live/no-exams-karnataka-minister-sureshkumar-clarification/

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚುತ್ತಿದೆ. ಇನ್ನೊಂದೆಡೆ ಶಾಲೆಯ ಕೊಠಡಿಗಳು ಸೇಫ್ ಅಂತಾ ಸಚಿವರು ಹೇಳುತ್ತಿದ್ದರೂ ಕೂಡ, ವಿದ್ಯಾರ್ಥಿಗಳು ಸಾರ್ವಜನಿಕ ಸಾರಿಗೆಯನ್ನು ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಸೋಂಕಿನ ಪ್ರಮಾಣ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಪೋಷಕರು ಕೂಡ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

Comments are closed.