ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ. ಬೆಂಗಳೂರಲ್ಲಿ 14 ಮಂದಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕು ಕಾಣಿಸಿಕೊಂಡ ಡಯಾಬಿಟಿಸ್ ರೋಗಿಗಳಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಬ್ಲಾಕ್ ಫಂಗಸ್ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಒಟ್ಟು 14 ಮಂದಿಗೆ ಬ್ಲಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, 7 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, 7 ಮಂದಿ ಇಎನ್‍ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಇಬ್ಬರನ್ನು ಬ್ಲಾಕ್ ಫಂಗಸ್ ಬಲಿ ಪಡೆದಿದೆ. ಇನ್ನು ಬೀದರ್ ನಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೇ ಬೆಳಗಾವಿಯಲ್ಲೂ ಓರ್ವ ಮೃತಪಟ್ಟಿದ್ದಾರೆ.
