BMTC : ಬೆಂಗಳೂರಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ: ಬಿಎಂಟಿಸಿ ಪ್ರಯಾಣ ದರ ಏರಿಕೆಯಿಲ್ಲ

ಬೆಂಗಳೂರು: ಕೊರೋನಾ ಹಾಗೂ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಬೆಂಗಳೂರಿಗರಿಗೆ ಶಾಕ್ ಕೊಡಲು ಸಿದ್ಧವಾಗಿದ್ದ ಬಿಎಂಟಿಸಿಗೆ ಸರ್ಕಾರ ಕಡಿವಾಣ ಹಾಕಿದ್ದು ಸದ್ಯ ಬೆಲೆ ಏರಿಕೆ ಪ್ರಸ್ತಾಪವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಸಾರಿಗೆ ನೌಕರರ ಮುಷ್ಕರ, ಪೆಟ್ರೋಲ್ ಡಿಸೇಲ್ ದರ ಏರಿಕೆಯಿಂದ ನಷ್ಟ ದಲ್ಲಿರುವ ಬಿಎಂಟಿಸಿ ನಷ್ಟ ಸರಿದೂಗಿಸಲು ಬಿಎಂಟಿಸಿ ದರ ಏರಿಕೆ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿತ್ತು. ಆದರೆ ಈ ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಸಚಿವ ಶ್ರೀರಾಮುಲು,ಸಿಎಂ ಬಸವರಾಜ್ ಬೊಮ್ಮಾಯಿಯವರು ಯಾವುದೇ ಕಾರಣಕ್ಕೂ ಪ್ರಯಾಣ ದರ ಏರಿಕೆ ಬೇಡ ಎಂದಿದ್ದಾರೆ. ಹೀಗಾಗಿ ಬಿಎಂಟಿಸಿ ಪ್ರಯಾಣ ದರವನ್ನು ಹೆಚ್ಚಿಸುವ ಯಾವುದೇ ಚಿಂತನೆ ಸರ್ಕಾರಕ್ಕಿಲ್ಲ ಎಂದಿದ್ದಾರೆ.

ಸರಕಾರಕ್ಕೆ ಎಷ್ಟೇ ಹೊರೆಯಾದ್ರೂ ಪರವಾಗಿಲ್ಲ. ಜನರು ಸಂಕಷ್ಟದಲ್ಲಿರೋ ಇಂಥ ಹೊತ್ತಿನಲ್ಲಿ ಜನರ ಮೇಲೆ ಹೊರೆ ಹಾಕುವುದಿಲ್ಲ.ಸಾರಿಗೆ ನಿಗಮದ ಆರ್ಥಿಕ ಪುನಶ್ಚೇತನಕ್ಕೆ ಬೇರೆ ಬೇರೆ ಮೂಲಗಳಿಂದ ಹಣ ಒದಗಿಸುವ ಪ್ರಯತ್ನ ಮಾಡುತ್ತೇವೆ ಎಂದು ಶ್ರೀರಾಮುಲು ಬೆಂಗಳೂರಿನಲ್ಲಿ ವಿವರಣೆ ನೀಡಿದ್ದಾರೆ. ಅಧಿವೇಶನಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.

(The government that gave Bengaluru Good News : BMTC has not increased its fares )

Comments are closed.