ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಗ್ನಿ ದುರಂತಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇದೀಗ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ: EXPLAINED : ತರಗುಪೇಟೆ ಸ್ಪೋಟದ ಕಾರಣ ಇನ್ನೂ ನಿಗೂಢ : ಸ್ಪೋಟ ಹುಟ್ಟು ಹಾಕಿದೆ ಹಲವು ಅನುಮಾನ !
ಫ್ಯಾಕ್ಟರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಮಿಕಲ್ ಘಾಟು ತುಂಬಿಕೊಂಡಿದ್ದು, ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಕೆಮಿಕಲ್ ಘಾಟಿನಿಂದ ಕರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ನ್ಯೂ ತರಗುಪೇಟೆ ಸ್ಪೋಟಕ್ಕೆ ಪಟಾಕಿಯೇ ಕಾರಣಾನಾ ? ಏನ್ ಹೇಳುತ್ತೆ ಪೊಲೀಸರ ತನಿಖೆ
(Boiler blast at Bangalore Chemical Factory: two injured)