ಕೊರೊನಾ ಸೋಂಕಿನ ವಿರುದ್ದ ಕಠಿಣ ಕ್ರಮ : ಇಂದಿನಿಂದ ಸೋಂಕಿತರ ಕೈಗೆ ಬೀಳುತ್ತೆ ಸೀಲ್..!!

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಠಿಣ ಕ್ರಮಕ್ಕೆ ಮುಂದಾಗಿದೆ. ಸೋಂಕು ದೃಢಪಟ್ಟಿರುವವರ ಕೈಗಳಿಗೆ ಕೋವಿಡ್ ದೃಢಪಟ್ಟಿದೆ ಎಂಬ ಮುದ್ರೆ (ಸೀಲ್)ನ್ನು ಹಾಕಲು ನಿರ್ಧರಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯದಲ್ಲಿ ಕೋವಿಡ್ ಸೋಂಕು ದೃಢಪಟ್ಟವರಿಗೆ ಸೀಲ್ ಹಾಕುವುದರ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಐಸೋಲೇಟ್ ಆಗಿರುವವರು ಮನೆಯಿಂದ ಹೊರಗೆ ಸಂಚರಿಸದಂತೆ ಮುದ್ರೆ ಹಾಕಲಾಗುತ್ತದೆ. ಮುದ್ರೆ ಹಾಕಿಸಿಕೊಂಡವರು ಹೊರಗಡೆ ತಿರುಗಾಡು ವುದನ್ನು ಕಂಡರೆ ಮಾರ್ಷಲ್ ಗಳು, ಪೊಲೀಸರು, ಗೃಹ ರಕ್ಷಕರು, ಸಾರ್ವಜನಿಕರು ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆಯೂ ಸೂಚನೆಯನ್ನು ನೀಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ‌ಹಿನ್ನೆಲೆಯಲ್ಲಿ ಬಿಬಿಎಂಪಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಸೋಂಕಿತ ಕೈಗೆ ಸೀಲ್ ಹಾಕುವ ಕಾರ್ಯಕ್ಕೆ ಮುಂದಾಗಿದ್ದು, ಕೊರೊನಾ ಸೋಂಕಿತರನ್ನು ಸುಲಭವಾಗಿ ಪತ್ತೆ ಹಚ್ಚುವ ಕಾರ್ಯಕ್ಕೆ ಸಹಕಾರಿಯಾಗಲಿದೆ.

Comments are closed.