ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನು ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ. ಕೊಲೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಆಸ್ಪತ್ರೆಗೆ ದಾಖಲು ಮಾಡಲಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
2018ರಲ್ಲಿ ಬೆಂಗಳೂರಿನ ಛಲವಾದಿ ಪಾಳ್ಯದ ಕಾರ್ಪೋರೇಟರ್ ಆಗಿದ್ದ ರೇಖಾ ಪತಿ ಕದಿರೇಶ್ ಅವರನ್ನು ಹಾಡಹಗಲೇ ಕಾಟನ್ ಪೇಟೆಯ ಅಂಜಿನಪ್ಪ ಗಾರ್ಡನ್ ನಲ್ಲಿ ಕೊಲೆ ಮಾಡಲಾಗಿತ್ತು. ಇದೀಗ ರೇಖಾ ಅವರನ್ನು ಮನೆಯಲ್ಲಿಯೇ ಕೊಲೆ ಮಾಡಲಾಗಿದೆ.
ರೇಖಾ ಕದಿರೇಶ್ ಅವರ ಮನೆಯ ಸುತ್ತಮುತ್ತಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಆದರೆ ಕೊಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿಲ್ಲ. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.