ಬೆಡ್ ಬ್ಲಾಕಿಂಗ್ ದಂಧೆ ವಿರುದ್ದ ಎಫ್ಐಆರ್ : ಇಬ್ಬರು ದಂಧೆಕೋರರ ಬಂಧನ

ಬೆಂಗಳೂರು : ಕೊರೊನಾ ಸೋಂಕಿತರ ಹೆಸರಲ್ಲಿ ಬೆಡ್ ಬ್ಲಾಕಿಂಗ್ ದಂಧೆ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದೀಗ ದಂಧೆಯ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ರೋಹಿತ್ ಹಾಗೂ ನೇತ್ರಾ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಕೊರೊನಾ ಸೋಂಕಿತರ ಹೆಸರಲ್ಲಿ ಬೆಂಗಳೂರು ನಗರದ ವಿವಿಧ ಆಸ್ಪತ್ರೆಗಳಲ್ಲಿ ಐಸೋಲೇಶನ್ ಆಗಿರುವವರ ಹೆಸರಲ್ಲಿ ಬೆಡ್ ಗಳನ್ನು ಬುಕ್ ಮಾಡಿ ನಂತರ ಆ ಬೆಡ್ ಗಳನ್ನು ಸಾವಿರಾರು ರೂಪಾಯಿಗೆ ಮಾರಾಟ ಮಾಡುತ್ತಿರುವ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ದಾಖಲೆ ಸಮೇತ ಬಯಲು ಮಾಡಿದ್ದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ದಂಧೆಯ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ದಂಧೆಯಲ್ಲಿ ಇನ್ನಷ್ಟು ಮಂದಿ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.

Comments are closed.