Wear a Mask : ಬೆಂಗಳೂರಿನ ಜನರೇ ಎಚ್ಚರ : ಮಾಸ್ಕ್ ಮರೆತರೆ ಬೀಳುತ್ತೆ ಭಾರೀ ದಂಡ

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್‌ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದೆ. ಇದೀಗ ಕೋವಿಡ್‌ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾಸ್ಕ್‌ ಕಡ್ಡಾಯಗೊಳಿಸಲು (Wear a Mask) ಮುಂದಾಗಿದೆ. ಅದ್ರಲ್ಲೂ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಮಾಸ್ಕ ಧರಿಸದವರಿಂದ ಭಾರಿ ದಂಡ ವಸೂಲಿ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

ಆರೋಗ್ಯ ಸಚಿವ ಕೆ.ಸುಧಾಕರ್ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರೀಯೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲೂ ಮಾಸ್ಕ್ ಕಡ್ಡಾಯಗೊಳಿಸಬೇಕು. ಜನರು ನಿರ್ಲಕ್ಷ್ಯದಿಂದ ಪರಿಸ್ಥಿತಿ ಕೈ ಮೀರುವ ಮುನ್ನವೇ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸರ್ಕಾರ ಪರಿಣಾಮಕಾರಿಯಾಗಿ ಮಾಸ್ಕ್‌ಗಳನ್ನು ಕಡ್ಡಾಯಗೊಳಿಸಿತ್ತು. ಈಗ ಸೋಂಕಿತರಿಗೆ ರೋಗಲಕ್ಷಣಗಳು ಗಂಭೀರವಾಗಿಲ್ಲ. ಹೆಚ್ಚಿನ ಸಾವುಗಳು ದಾಖಲಾಗುತ್ತಿಲ್ಲ ಆದರೆ ಜನರು ಇದನ್ನು ಸಣ್ಣ ಜ್ವರ ಎಂದು ನಿರ್ಲಕ್ಷಿಸುತ್ತಿದ್ದಾರೆ. ಇದರಿಂದಾಗಿ ಮುಂದೊಂದು ದಿನ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಾದಾಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಬದಲು ಈಗಲೇ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ರಾಜ್ಯದಲ್ಲಿ ಅಬ್ಬರಿಸುತ್ತಿದೆ ಮಳೆ

ಬೆಂಗಳೂರು : ರಾಜ್ಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿದೆ. ಶೃಂಗೇರಿ-ಆಗುಂಬೆ ರಸ್ತೆ ಬಂದ್. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಶೃಂಗೇರಿಯ ನೀಳ್ಕೊಡಿಗೆ ಬಳಿ ರಾಜ್ಯ ಹೆದ್ದಾರಿ 100 ಅಡಿಗಳಷ್ಟು ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಶೃಂಗೇರಿ-ಆಗುಂಬೆ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗೂ ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ : Shiradi Ghat travel ban : ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌

ಇದನ್ನೂ ಓದಿ : Byndur murder case : ಮಲಯಾಳಂ ಸಿನಿಮಾ ಆಧರಿಸಿ ನಡೆದಿತ್ತು ಹತ್ಯೆಗೆ ಮಾಸ್ಟರ್​ ಪ್ಲಾನ್

ಇದನ್ನೂ ಓದಿ : state government : ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಫೋಟೋ/ವಿಡಿಯೋ ಕ್ಲಿಕ್ಕಿಸುವಂತಿಲ್ಲ : ರಾಜ್ಯ ಸರ್ಕಾರದ ಮಹತ್ವದ ಆದೇಶ

Bengaluru People beware you will be fined, If you don’t wear a mask

Comments are closed.