Bengaluru Rains : ಕರ್ನಾಟಕದಲ್ಲಿ ಮುಂದುವರಿದ ಮಳೆ : ಕರಾವಳಿ, ಮಲೆನಾಡಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : (Bengaluru Rains)ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ (ನವೆಂಬರ್ 6 )ವರೆಗೆ ಮಳೆ ಮುಂದುವರಿಯಲಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ  ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Rains)ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು(Bengaluru Rains) ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು , ಕೆಲವು ಕಡೆಗಳಲ್ಲಿ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು , ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು , ಕರಾವಳಿ ಭಾಗದಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದ್ದು , ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಸುತ್ತಮುತ್ತ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು , ಕೆಲವು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ.

ಇದನ್ನೂ ಓದಿ : Karnataka Rains : ಕರ್ನಾಟಕದಲ್ಲಿ 5 ದಿನ ಭಾರೀ ಮಳೆ : ಹೈ ಅಲರ್ಟ್​ ಘೋಷಣೆ

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಇಂದಿನಿಂದ ನವೆಂಬರ್ 6ರವರೆಗೆ  ಭಾರೀ ಮಳೆಯಾಗುವ ಸಾಧ್ಯತೆ ಇದ್ದು , ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ  ಅಲರ್ಟ್​ ಘೋಷಿಸಲಾಗಿದೆ.  ಮೂರು ನಾಲ್ಕು ದಿನಗಳಿಂದ  ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿರುವ ಕಾರಣ ತಗ್ಗುಪ್ರದೇಶ ಹಾಗೂ ರಾಜಕಾಲುವೆಯ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಸುರಕ್ಷಿತವಾಗಿರಲು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಲಾಗಿದೆ. ಅದರಲ್ಲೂ ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : Bad Weather : ಬೆಂಗಳೂರಲ್ಲಿ ಹೆದಗೆಟ್ಟ ಹವಾಮಾನ : ಶೀತ, ಜ್ವರ, ಕೆಮ್ಮಿಗೆ ತತ್ತರಿಸಿದ ಮಕ್ಕಳು

ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ಮಾನ್ಸೂನ್ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ  ಎಚ್ಚರಿಕೆಯಿಂದ ಇರಲು ಸೂಚನೆಯನ್ನು ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.  ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು , ಕೇರಳ ಮತ್ತು ಮಾಹೆಯಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : Bad weather : ಬೆಂಗಳೂರಲ್ಲಿ ಹದಗೆಟ್ಟ ಹವಾಮಾನ : ಶೀತ, ಜ್ವರ, ಕೆಮ್ಮಿಗೆ ತತ್ತರಿಸಿದ ಮಕ್ಕಳು

ಪುದುಚೆರಿಯಲ್ಲಿ ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಮತ್ತು ಬಹುತೇಕ ಎಲ್ಲಾ ರಸ್ತೆಗಳು ಜಲಾವೃತವಾಗಿದ್ದು, ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಶಾಲಾ ಶಿಕ್ಷಣ ನಿರ್ದೇಶನಾಲಯವು ಪುದುಚೆರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಇಂದು (ಶುಕ್ರವಾರ) ರಜೆ ಘೋಷಿಸಿದೆ. ಚೆನ್ನೈ ಸೇರಿದಂತೆ ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರು ಈ  7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ,   ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಅತೀ ಹೆಚ್ಚು ಮಳೆ ಸುರಿದ ಕಾರಣ  ಪ್ರವಾಹ ಬೀತಿ ಎದುರಾಗಿದೆ.

(Bengaluru Rains) Rain will continue for two more days (November 6) in many districts of Karnataka including the capital Bengaluru. The Meteorological Department has warned that rain will continue for 3 days from today in the northern hinterland, coastal and southern hinterland districts of the state. Due to the surface cyclone in the Bay of Bengal, there is a possibility of heavy rains in the entire state including Bengaluru Rains for another 3 days and yellow alert has been announced in many districts of the state.

Comments are closed.