Bengaluru Rains : ರಾಜ್ಯದಲ್ಲಿ ವರುಣಾರ್ಭಟ ; ಕರಾವಳಿ, ಮಲೆನಾಡಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು : (Bengaluru Rains )ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ(Bengaluru Rains ) ಸಾಧ್ಯತೆ ಇದೆ. ಇಂದು ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆ ‘ಹಳದಿ ಅಲರ್ಟ್ʼ ಘೋಷಣೆ ಮಾಡಿದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ (Bengaluru Rains )ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದ್ದು, ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ   ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : Shikar Dhavan :  ಬಾಲಿವುಡ್ ನಲ್ಲಿ ಮಿಂಚಲು ಶಿಖರ್ ಧವನ್ ರೆಡಿ

ಇದನ್ನೂ ಓದಿ : Uttar Pradesh : ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಬಾಲಕಿ ; ಕೊಲ್ಲಲು ಮುಂದಾದ ತಾಯಿ ಮತ್ತು ಸಹೋದರಿ

ಉತ್ತರ ತಮಿಳುನಾಡು ಮತ್ತು ನೆರೆಹೊರೆಯ ಪ್ರದೇಶದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀವರೆಗೆ ವಿಸ್ತರಿಸಿದೆ. ಕರ್ನಾಟಕದ ಒಳನಾಡಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ವಾತಾವರಣವಿರಲಿದ್ದು, ಬೆಂಗಳೂರು, ಕೊಡಗು, ಚಿಕ್ಕಮಗಳೂರು, ತುಮಕೂರು, ಕೋಲಾರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಒಳನಾಡಿನ ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ .

ಇದನ್ನೂ ಓದಿ : DY Chandrachood : ಸುಪೀಂಕೋರ್ಟ್‌ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿವೈ ಚಂದ್ರಚೂಡ್‌

ಇಂದು ಅರುಣಾಚಲ ಪ್ರದೇಶದಲ್ಲಿ ವ್ಯಾಪಕವಾದ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

(Bengaluru Rains) Silicon City Bengaluru has had rain and cold weather for the past few weeks. Bangalore will have cloudy weather for the next few days.

Comments are closed.