BMTC : ಪ್ರಯಾಣಿಕರಿಗೆ ಬಿಗ್ ಶಾಕ್ : ಶೇ.20ರಷ್ಟು ಪ್ರಯಾಣದರ ಏರಿಕೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಾಕ್ ಡೌನ್ ಜಾರಿಯಲ್ಲಿದೆ. ಇದರ ನಡುವಲ್ಲೇ ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್ ಶಾಕ್ ಕೊಟ್ಟಿದೆ. ಟಿಕೆಟ್ ಪ್ರಯಾಣ ದರವನ್ನು ಶೇ.18 ರಿಂದ 20ರಷ್ಟು ಏರಿಕೆ ಮಾಡಲು ಮುಂದಾಗಿದೆ.

ಕಳೆದೊಂದು ತಿಂಗಳಿನಿಂದಲೂ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಅಲ್ಲದೇ ತೈಲ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಜೊತೆಗೆ ನೌಕರರ ಪ್ರತಿಭಟನೆ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಿಎಂಟಿಸಿ ನಷ್ಟ ಅನುಭವಿಸಿದೆ. ತೈಲ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಟಿಕೆಟ್ ಪ್ರಯಾಣ ದರ ಹೆಚ್ಚಳ ಮಾಡುವ ಕುರಿತು ಬಿಎಂಟಿಸಿ ಸರಕಾರಕ್ಕೆ ಮನವಿ ಮಾಡಿಕೊಂಡಿದೆ.

ತೈಲ ಬೆಲೆ ಏರಿಕೆ ಹಾಗೂ ಬಿಎಂಟಿಸಿ ತನ್ನ ನಷ್ಟವನ್ನು ಸರಿದೂಗಿಸಿಕೊಳ್ಳಲು ಶೇ.18ರಿಂದ 20ರಷ್ಟು ಏರಿಕೆಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ರೆ ಲಾಕ್ ಡೌನ್ ಮುಗಿಯುತ್ತಿದ್ದಂತೆಯೇ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವುದು ಫಿಕ್ಸ್. ಅಲ್ಲದೇ ಬಿಎಂಟಿಸಿ ಕೂಡ ಪ್ರಸ್ತುತ ಸ್ಥಿತಿಯಲ್ಲಿ ಟಿಕೆಟ್ ದರ ಏರಿಕೆ ಅನಿವಾರ್ಯ ಎಂದು ಬಿಎಂಟಿಸಿ ಹೇಳಿಕೊಂಡಿದೆ.

Comments are closed.