ಬೆಂಗಳೂರು : ಕಾಲಿಗೆ ಗುಂಡು ಹಾರಿಸಿ ಸಿಸಿಬಿ ಪೊಲೀಸರು ರೌಡಿಶೀಟರ್ ಓರ್ವನನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ರೌಡಿಶೀಟರ್ ಸೂರ್ಯ ಎಂಬಾತನೇ ಪೊಲೀಸರಿಂದ ಬಂಧನಕ್ಕೆ ಒಳಗಾದ ರೌಡಿಶೀಟರ್. ಸೂರ್ಯನನ್ನು ಬಂಧಿಸಲು ಹೋದಾಗ ಸಿಸಿಬಿ ಹೆಡ್ ಕಾನ್ಸ್ಟೇಬಲ್ ಹನುಮೇಶ್ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾನೆ. ಆ ವೇಳೆ ಆತ್ಮರಕ್ಷಣೆಗಾಗಿ ಸಿಸಿಬಿ ಎಸಿಪಿ ಪರಮೇಶ್ವರ್ ಆರೋಪಿ ಸೂರ್ಯನಿಗೆ ಫೈರ್ ಮಾಡಿದ್ದಾರೆ.
ರೌಡಿಶೀಟರ್ ಸೂರ್ಯ ವಿರುದ್ದ 2015 ರಲ್ಲಿ ರಾಮಮೂರ್ತಿ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಅಲ್ಲದೇ 2016ರಲ್ಲಿ ಮತ್ತೊಂದು ಕೊಲೆ ಕೇಸ್ ಈತನ ವಿರುದ್ಧ ದಾಖಲಾಗಿತ್ತು. ಕೆ.ಜಿ ಹಳ್ಳಿ ಠಾಣೆಯಲ್ಲಿ 307 ಸೇರಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಗಾಯಾಳು ರೌಡಿಶೀಟರ್ ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
