ಬೆಂಗಳೂರು : ಕೊರೊನಾ ವೈರಸ್ ಸೋಂಕು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹೆಚ್ಚುತ್ತಲೇ ಇದ್ದು, ಕಳೆದ 10 ದಿನಗಳ ಅವಧಿಯಲ್ಲಿ ಬರೋಬ್ಬರಿ 33,000 ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ರಾಜಧಾನಿಯ ಮಂದಿ ಬೆಚ್ಚಿಬಿದ್ದಿದ್ದಾರೆ.

ಕಳೆದೊಂದು ವಾರದಿಂದಲೂ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ನಿತ್ಯವೂ 3 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಪತ್ತೆಯಾಗುತ್ತಿರುವುದು ಆತಂಕವನ್ನು ಮೂಡಿಸಿದೆ.

ಅದ್ರಲ್ಲೂ ಗುರುವಾರ 3,799 ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,84,082ಕ್ಕೆ ಏರಿಕೆಯಾಗಿದೆ.