ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕಣ ಹೆಚ್ಚುತ್ತಿದೆ. ಮೂರನೇ ಅಲೆಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.
ಕಳೆದ ಕೆಲವು ದಿನಗಳಿಂದಲೂ ಇಳಿಕೆಯನ್ನು ಕಾಣುತ್ತಿದ್ದ ಕೊರೊನಾ ವೈರಸ್ ಸೋಂಕು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿಧಾನಕ್ಕೆ ಏರಿಕೆ ಕಾಣಿತ್ತಿದೆ. ಅದ್ರಲ್ಲೂ ಬೆಂಗಳೂರಿನ ಮಹಾದೇವಪುರ, ಯಲಹಂಕ, ಬೊಮ್ಮನಹಳ್ಳಿ ಸುತ್ತಮುತ್ತಿಲಿನ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ.
ಅದ್ರಲ್ಲೂ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ವಿವಿಧೆಡೆಗಳಲ್ಲಿನ ಸುಮಾರು ಬೆಂಗಳೂರಲ್ಲಿ 80 ಅಪಾರ್ಟ್ ಮೆಂಟ್ 70 ಮನೆ ಸೀಲ್ ಡೌನ್ ಮಾಡಲಾಗಿದ್ದು, ಸುಮಾರು 160 ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ. ಅಲ್ಲದೇ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಪ್ರದೇಶಗಳಲ್ಲಿ ಸೀಲ್‌ಡೌನ್ ಆಗುವ ಸಾಧ್ಯತೆಯಿದೆ.
ಈಗಾಗಲೇ ಬಿಬಿಎಂಪಿ ಬೆಂಗಳೂರಿನಲ್ಲಿ ನೈಟ್ ಕರ್ಪ್ಯೂ, ವೀಕೆಂಡ್ ಲಾಕ್‌ಡೌನ್ ಜಾರಿ ಮಾಡುವಂತೆ ಕೋರಿ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಕಠಿಣ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.