1369 ಪೊಲೀಸರಿಗೆ ಕೊರೊನಾ ಶಾಕ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಸಿಲಿಕಾನ್ ಸಿಟಿ ಪೊಲೀಸರನ್ನು ತತ್ತರಿಸಿ ಹೋಗುವಂತೆ ಮಾಡಿದೆ. ಇದೀಗ ಬೆಂಗಳೂರು‌ ನಗರದಲ್ಲಿ ಬರೋಬ್ಬರಿ 1369 ಮಂದಿಗೆ ಸೋಂಕು ದೃಢಪಟ್ಟಿದ್ದು 12 ಮಂದಿ ಪೊಲೀಸ್ ಸಿಬ್ಬಂದಿಯನ್ನು ಬಲಿ ಪಡೆದಿದೆ.

ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಾರ್ಯಾಲಯ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ನಗರದಲ್ಲಿ ಒಟ್ಟು 1,369 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 693 ಮಂದಿ ಮನೆಗಳಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. 16 ಮಂದಿ ಕೋವಿಡ್ ಕೇರ್ ಸೆಂಟರ್‌ ನಲ್ಲಿ ಹಾಗೂ 15 ಮಂದಿ ಸಾಮಾನ್ಯ ವಾರ್ಡ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 726 ಸಕ್ರೀಯ ಪ್ರಕರಣಗಳಿವೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೂ ಕೊರೊನಾ ಸೋಂಕು ಖಾಕಿ ಪಡೆಯನ್ನು ಕಾಡಿತ್ತು. ಇದೀಗ‌ ಎರಡನೇ ಅಲೆಯಲ್ಲಿ ಯೂ ಪೊಲೀಸರನ್ನು ತತ್ತರಿಸುವಂತೆ ಮಾಡಿದೆ. ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಪೊಲೀಸರು ಕೊರೊನಾ ಆತಂಕದಲ್ಲಿಯೇ ಕಾರ್ಯ ನಿರ್ವಹಣೆ ಮಾಡಬೇಕಾಗಿದೆ.

Comments are closed.