ಕರ್ನಾಟಕ ಹೈಕೋರ್ಟ್ ನ 10 ನ್ಯಾಯಮೂರ್ತಿಗಳಿಂದ ಪ್ರಮಾಣ ವಚನ ಸ್ವೀಕಾರ

ಹೈಕೋರ್ಟ್ ಗೆ ವಿವಿಧ ಕಾಲಾವಧಿಯಲ್ಲಿ ನೇಮಕಗೊಂಡಿದ್ದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಎಂ.ಐ.ಅರುಣ್, ಇ.ಎಸ್ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ, ಎಸ್.ವಿಶ್ವಜಿತ್ ಶೆಟ್ಟಿ, ಎ.ಜಿ.ಉಮಾ, ಪಿ.ಎನ್.ದೇಸಾಯಿ, ಪಿ.ಕೃಷ್ಣ ಭಟ್ ಸೇರಿದಂತೆ 10 ನ್ಯಾಯಾಮೂರ್ತಿಗಳ ಸೇವೆಯನ್ನು ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಸರ್ಕಾರ ಖಾಯಂಗೊಳಿಸಿ ಆದೇಶ ನೀಡಿತ್ತು.

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ 10 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು 10 ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನೇಮಕಾತಿ 2021 : ವೇತನ 81,100 ರೂ., ಪದವಿಧರರಿಗೆ ಸುವರ್ಣಾವಕಾಶ

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 10 ನ್ಯಾಯಾಧೀಶರಿಗೆ ಪ್ರತಿಜ್ಞಾವಿದಿ ಬೋಧಿಸಿದರು. 10 ನ್ಯಾಯಾಮೂರ್ತಿಗಳ ಸೇವೆಯನ್ನು ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಸರ್ಕಾರ ಖಾಯಂಗೊಳಿಸಿ ಆದೇಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ : ಇಬ್ಬರಿಗೆ ಗಂಭೀರ ಗಾಯ

ಇಂದು ನಡೆದ ಪದಗ್ರಹಣ ಸಮಾರಂಭದಲ್ಲಿ ಹೈಕೋರ್ಟ್ ಗೆ ವಿವಿಧ ಕಾಲಾವಧಿಯಲ್ಲಿ ನೇಮಕಗೊಂಡಿದ್ದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಎಂ.ಐ.ಅರುಣ್, ಇ.ಎಸ್ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ, ಎಸ್.ವಿಶ್ವಜಿತ್ ಶೆಟ್ಟಿ, ಎ.ಜಿ.ಉಮಾ, ಪಿ.ಎನ್.ದೇಸಾಯಿ, ಪಿ.ಕೃಷ್ಣ ಭಟ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

(Affidavit sworn in by 10 judges of Karnataka High Court)

Comments are closed.