Covid 19 cases : ರಾಜ್ಯ ರಾಜಧಾನಿಯಲ್ಲಿ ಹೆಚ್ಚಿದ ಕೋವಿಡ್​ ಆತಂಕ : ಫೇಸ್​ ಮಾಸ್ಕ್​ ಕಡ್ಡಾಯ

ಬೆಂಗಳೂರು : covid 19 cases : ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ನಾಲ್ಕನೇ ಅಲೆಯ ಭೀತಿ ಮತ್ತಷ್ಟು ಹೆಚ್ಚಾಗಿದೆ . ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿ ವಿಶೇಷ ಆಯುಕ್ತ ಕೆ.ಹರೀಶ್​ ಕುಮಾರ್​​ ಬೆಂಗಳೂರಿನಲ್ಲಿ ಫೇಸ್​ ಮಾಸ್ಕ್​ಗಳನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದಾರೆ.


ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದೇವೆ. ಹೀಗಾಗಿ ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ. ಆದ್ದರಿಂದ ನಗರದಲ್ಲಿ ಫೇಸ್​ ಮಾಸ್ಕ್​ ಧರಿಸದವರ ವಿರುದ್ಧ ನಿಗಾ ವಹಿಸಿ ಎಂದು ಮಾರ್ಷಲ್​ಗಳಿಗೆ ಬಿಬಿಎಂಪಿ ವಿಶೇಷ ಆಯುಕ್ತ ಕೆ. ಹರೀಶ್​ ಕುಮಾರ್​ ನಿರ್ದೇಶನ ನೀಡಿದ್ದಾರೆ.


ರಾಜ್ಯದಲ್ಲಿ ಹೊಸದಾಗಿ 301 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಇದರಲ್ಲಿ 291 ಮಂದಿ ಸೋಂಕಿತರು ರಾಜ್ಯ ರಾಜಧಾನಿ ಬೆಂಗಳೂರಿಗೆ ಸೇರಿದವರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 17,88,895ಕ್ಕೆ ಏರಿಕೆ ಕಂಡಿದೆ. ಈ ಸೋಂಕಿತರ ಪೈಕಿ 17,69,636 ಮಂದಿ ಗುಣಮುಖರಾಗಿದ್ದರೆ 16,964 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.ಇನ್ನೇನು ಕೊರೊನಾ ಹತೋಟಿಗೆ ಬಂತು ಎಂಬಷ್ಟರಲ್ಲಿ ಮತ್ತೆ ಸೋಂಕಿನ ಸಂಖ್ಯೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಫೇಸ್​ ಮಾಸ್ಕ್​ಗಳನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.


ಇದರ ಜೊತೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಬಿಬಿಎಂಪಿ ಸೂಚನೆ ನೀಡಿದೆ. ಇಲ್ಲಿಯವರೆಗೆ ಪ್ರತಿ ನಿತ್ಯ 16 ಸಾವಿರ ಮಂದಿಗೆ ನಡೆಸಲಾಗುತ್ತಿದ್ದ ಕೊರೊನಾ ಮಾದರಿ ಪರೀಕ್ಷೆಗಳನ್ನು ಇನ್ನಷ್ಟು ಹೆಚ್ಚಿಸಿ ಪ್ರತಿ ದಿನ 20 ಸಾವಿರ ಮಂದಿಗೆ ಕೋವಿಡ್​ ಸೋಂಕಿನ ಪರೀಕ್ಷೆಗಳನ್ನು ನಡೆಸಿ ಎಂದು ಹರೀಶ್​ ಕುಮಾರ್​ ಸೂಚನೆ ಹೊರಡಿಸಿದ್ದಾರೆ.

ಇದನ್ನು ಓದಿ : PSI Exams Scam : ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ : ಕಾನ್ಸ್ ಟೇಬಲ್ ಹರೀಶ್ ಬಂಧನ

ಇದನ್ನೂ ಓದಿ : Saurav Ganguly : ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ : ಸ್ಪಷ್ಟನೆ ಕೊಟ್ಟ ಶಾ

covid 19 cases rise mask is compulsory in bengaluru

Comments are closed.