Covid School holiday :ಕೋವಿಡ್ ಪ್ರಕರಣ ಹೆಚ್ಚಳ : ಕರ್ನಾಟಕದ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : (Covid School holiday)ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ರಾಜ್ಯ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಾದ್ಯಂತ ಸಂಪೂರ್ಣ ಮಾಸ್ಕ್ ಕಡ್ಡಾಯಕ್ಕೆ ಚಿಂತನೆ ನಡೆಸಿದ್ದು, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಸೂಚನೆಯನ್ನು ನೀಡಲಾಗಿದೆ. ಈ ನಡುವಲ್ಲೇ ಕರ್ನಾಟಕದ ಶಾಲೆಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

(Covid School holiday)ಖಾಸಗಿ ಶಾಲೆಗಳ ಒಕ್ಕೂಟ (RUPSA )ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.ಶಾಲೆಗಳಲ್ಲಿ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ. ಇದು ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳಿಗೆ RUPSA ಸಂಸ್ಥೆಯಿಂದ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.

ಶಾಲೆಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ನೆಗಡಿ, ಕೆಮ್ಮು ಮತ್ತು ಜ್ವರ ಇದ್ದರೆ ರಜೆ ತೆಗೆದುಕೊಳ್ಳುವಂತೆ ಹೇಳಿದರು. ನೆಗಡಿ, ಕೆಮ್ಮು, ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಕೂಡಲೇ ಪೋಷಕರಿಗೆ ಮಾಹಿತಿ ನೀಡಬೇಕು.

ಶಾಲಾ ಆವರಣವನ್ನು ದಿನದಿಂದ ದಿನಕ್ಕೆ ಶುಚಿಗೊಳಿಸಬೇಕು. ಮಕ್ಕಳ ದಟ್ಟಣೆಯನ್ನು ನಿಯಂತ್ರಿಸಬೇಕು. ಶಾಲಾ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು

ಇದನ್ನೂ ಓದಿ:7th Pay Commission Latest Update : 50 ಲಕ್ಷ ಪಿಂಚಣಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರಕಾರ

ಇದನ್ನೂ ಓದಿ:Kumuli Road Accident : ಕಂದಕಕ್ಕೆ ಉರುಳಿದ ಕಾರು : 8 ಮಂದಿ ಶಬರಿಮಲೆ ಯಾತ್ರಿಕರ ಸಾವು, ಇಬ್ಬರಿಗೆ ಗಂಭೀರ ಗಾಯ

ಇದನ್ನೂ ಓದಿ:Omicron BF.7: ಕೊರೊನಾ ಹೊಸ ರೂಪಾಂತರದ ಬಗ್ಗೆ ಭಯ ಬೇಡ ಈ ನಿಯಮ ಪಾಲಿಸಿ ಸಾಕು

ಇದಲ್ಲದೇ ಶಾಲೆಯಲ್ಲಿ ನೀರು, ಆಹಾರ ಹಂಚಿಕೊಳ್ಳದಂತೆ ಮಕ್ಕಳಿಗೆ ಸೂಚನೆ ನೀಡಬೇಕು. ನಾಳೆಯಿಂದ ಜಾರಿಗೆ ಬರುವಂತೆ ಈ ನಿಯಮಗಳನ್ನು ಪಾಲಿಸುವಂತೆ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:Charles Sobhraj : ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌ಗೆ ನೇಪಾಳ ಜೈಲಿನಿಂದ ಸಿಕ್ತು ಬಿಡುಗಡೆ ಭಾಗ್ಯ

Covid School holiday Increase in Covid cases: New guidelines announced for schools in Karnataka

Comments are closed.