ಸೋಮವಾರ, ಏಪ್ರಿಲ್ 28, 2025
Homekarnatakaಬುರ್ಖಾಧಾರಿ ಮಹಿಳೆಗೆ ಡ್ರಾಪ್‌ ವೇಳೆ ಹಲ್ಲೆ : ಆರೋಪಿಗಳ ವಿರುದ್ದ7 ಸೆಕ್ಷನ್ ಅಡಿ ಪ್ರಕರಣ ದಾಖಲು

ಬುರ್ಖಾಧಾರಿ ಮಹಿಳೆಗೆ ಡ್ರಾಪ್‌ ವೇಳೆ ಹಲ್ಲೆ : ಆರೋಪಿಗಳ ವಿರುದ್ದ7 ಸೆಕ್ಷನ್ ಅಡಿ ಪ್ರಕರಣ ದಾಖಲು

- Advertisement -

ಬೆಂಗಳೂರು: ಬುರ್ಖಾಧಾರಿ ಮಹಿಳೆಗೆ ಡ್ರಾಪ್ ನೀಡುತ್ತಿದ್ದ ವೇಳೆಯಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ನಡಸಲಾಗಿತ್ತು. ಅಲ್ಲದೇ ಯುವಕನ್ನು ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಸದ್ದುಗುಂಟೆಪಾಳ್ಯ ಠಾಣೆಯ ಪೊಲೀಸರು ಇಬ್ಬರ ವಿರುದ್ಧ 7 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳಾದ ಸೊಹೇಲ್ ಹಾಗೂ ನಯಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಮಹಿಳೆ ನೀಡಿದ ದೂರಿನ ಮೇರೆಗೆ 7 ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಯುವತಿ ಹೆಸರಲ್ಲಿ ಯುವಕರಿಗೆ ಪಾಕ್ ISI ಗಾಳ : ಫೇಸ್‌ಬುಕ್‌ನಲ್ಲಿ ಮಿಲಿಟರಿ ಮಾಹಿತಿ ಲೀಕ್ ಮಾಡಿದ್ದಾತ ಅರೆಸ್ಟ್‌

ಐಪಿಸಿ ಸೆಕ್ಷನ್ 153(a) ಉದ್ದೇಶಪೂರ್ವಕವಾಗಿ ಎರಡು ಧರ್ಮಗಳ ನಡುವೆ ದ್ವೇಷ, ಸೆಕ್ಷನ್ 506- ಜೀವ ಬೆದರಿಕೆ, 341- ಅಕ್ರಮ ತಡೆ, 34 ಉದ್ದೇಶಪೂರ್ವಕ ಜನರಿಗೆ ನೋವುಂಟು ಮಾಡುವುದು, 504 ಮಾನಹಾನಿ, 323- ಮನಸ್ಸಿಗೆ ಘಾಸಿ ಹಾಗೂ 354 ಮಹಿಳೆ ಮೇಲೆ ದೌರ್ಜನ್ಯರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬುರ್ಖಾಧಾರಿ ಮಹಿಳೆಗೆ ಡ್ರಾಪ್‌ ಕೊಡುತ್ತಿದ್ದ ವೇಳೆಯಲ್ಲಿ ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣವನ್ನು ಬೆಂಗಳೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಕೂಡ ಈ ಕುರಿತು ಟ್ವೀಟ್‌ ಮಾಡಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮ ಜರುಗಿಸುವ ಭರವಸೆಯನ್ನು ನೀಡಿದ್ದರು.

ಇದನ್ನೂ ಓದಿ: Bangalore : ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : 3 ಡೆತ್‌ ನೋಟ್‌ ಪತ್ತೆ, ಅನೈತಿಕ ಸಂಬಂಧಕ್ಕೆ ಬಲಿಯಾತ್ತ ಕುಟುಂಬ !

ಇನ್ನೊಂದೆಡೆಯಲ್ಲಿ ಆರೋಪಿಗಳು ತಾವು ಪ್ರಚಾರದ ಗೀಳಿನಿಂದ ಈ ಕೃತ್ಯವನ್ನು ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದೇವೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದರು. ಇದಗ ಪ್ರಕರಣ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ.

(A biker was assaulted while giving a drop to a woman. Two accused have been arrested in connection with the case.)

RELATED ARTICLES

Most Popular