ಬೆಂಗಳೂರು : ದೇಶದಾದ್ಯಂತ ಗಣೇಶ ಚತುರ್ಥಿ (Ganesh Chaturthi ) ಸಮೀಪಿಸುತ್ತಿದೆ. ಮನೆ ಮನೆಗಳಲ್ಲಿಯೂ ಗಣೇಶ ಮೂರ್ತಿಯನ್ನು ಕುಳ್ಳಿರಿಸಿ ಹಬ್ಬವನ್ನಾಚರಿಸಲು ತಯಾರಿ ಜೋರಾಗಿದೆ. ತಮ್ಮಿಷ್ಟದ ಮೂರ್ತಿಗಳನ್ನು ಈಗಾಗಲೇ ಜನರು ಆರ್ಡರ್ ಮಾಡುತ್ತಿದ್ದಾರೆ. ಆದ್ರೀಗ ಬೆಂಗಳೂರು ಮಹಾನಗರ ಪಾಲಿಕೆ (Bangalore Metropolitan Corporation) ಗಣೇಶ ಹಬ್ಬಕ್ಕಾಗಿ ಹೊಸ ರೂಲ್ಸ್ ಜಾರಿ ಮಾಡಿದೆ. ಮನೆ ಮನೆಗಳಲ್ಲಿ ಗಣೇಶ ಮೂರ್ತಿಯನ್ನು ಕೂರಿಸಿ ಪೂಜೆ ಮಾಡುವವರು ಈ (BBMP) ರೂಲ್ಸ್ ತಿಳಿದುಕೊಳ್ಳಲೇ ಬೇಕು.
ಬೆಂಗಳೂರಿನಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆಯನ್ನು ಮಾಡಲಾಗುತ್ತಿದೆ. ಗಣೇಶನ ಅಂದ ಹೆಚ್ಚಿಸಲು, ಕಡಿಮೆ ಬೆಲೆಗೆ ಸಿಗುತ್ತೆ ಅಂತಾ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶಮೂರ್ತಿಯನ್ನು ಕೂರಿಸಿ ಪೂಜೆ ಮಾಡುತ್ತಾರೆ. ಆದರೆ ಈ ಬಾರಿಯ ಗಣೇಶ ಹಬ್ಬಕ್ಕೆ ಬಿಬಿಎಂಪಿ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದೆ. ಬೆಂಗಳೂರಿನಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪ ವಿಗ್ರಹ ಮಾರಾಟ ಮತ್ತು ತಯಾರಿಕೆಗೆ ಕಟ್ಟುನಿಟ್ಟಿನ ನಿಷೇಧವನ್ನು ಹೇರಿದೆ.

ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಅವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದ ವಿವಿಧೆಡೆ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು, ರಸ್ತೆಗಳಲ್ಲಿ ಗೊಂದಲ ರಹಿತವಾಗಿ ಆಚರಣೆಗೆ ಬಿಬಿಎಂಪಿ ನಿರ್ದೇಶನ ನೀಡಿದೆ. ಪರಿಸರ ಸ್ನೇಹಿಯಾಗಿ ಉತ್ಸವ ನಡೆಯುವಂತೆ ನೋಡಿಕೊಳ್ಳಲಾಗುವುದು ಮತ್ತು ಆಚರಣೆಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಅಂತವರ ವಿರುದ್ಕ್ರದ ಕಠಿಣಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ನಿಮಗಿನ್ನೂ ಗೃಹಲಕ್ಷ್ಮೀ ಯೋಜನೆ ಹಣ ಬಂದಿಲ್ವಾ?! ಹಣ ಪಡೆಯೋಕೆ ಏನು ಮಾಡ್ಬೇಕು? ಇಲ್ಲಿದೆ ಡಿಟೇಲ್ಸ್
ಹಬ್ಬದ ಸಂದರ್ಭದಲ್ಲಿ ನಗರದಾದ್ಯಂತ ಬ್ಯಾನರ್ ಮತ್ತು ಫ್ಲೆಕ್ಸ್‌ಗಳಿಗೆ ಕಟ್ಟುನಿಟ್ಟಾದ ನಿಷೇಧವನ್ನು ವಿಧಿಸಿದೆ. ಬೆಂಗಳೂರಿನಲ್ಲಿ ಈಗಾಗಲೇ ಅನಧಿಕೃತ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಮತ್ತು ಹೋರ್ಡಿಂಗ್‌ಗಳನ್ನು ನಿಷೇಧಿಸಲಾಗಿದೆ. ಹಾಗಾಗಿ ಸಿಲಿಕಾನ್ ಸಿಟಿಯಲ್ಲಿ ಈ ವರ್ಷ ಗಣೇಶ ಚತುರ್ಥಿಯನ್ನು ಬಹಳ ಕಟ್ಟುನಿಟ್ಟಿನಲ್ಲಿ ಆಚರಿಸುವಂತೆ ಆಗಿದೆ. ಆದರೆ ಸಿಲಿಕಾನ್ ಜನತೆ ಗಣೇಶ ಚತುರ್ಥಿಯ ವಿಜೃಂಬಣೆಯನ್ನು ಕಡಿಮೆಯಾಗುವುದಿಲ್ಲ. ಇದನ್ನೂ ಓದಿ : ಸರಕಾರದ ಹೊಸ ಸಾಲ ಯೋಜನೆ : ಯಾವುದೇ ಅಡಮಾನವಿಲ್ಲದೇ ಸಿಗುತ್ತೆ 10 ಲಕ್ಷ ರೂಪಾಯಿ
ವಿಗ್ರಹಗಳ ವಿಸರ್ಜನೆಯ ಸಮಯದಲ್ಲಿ ವ್ಯವಸ್ಥೆ ಮಾಡಲು ಬಿಬಿಎಂಪಿ ವಿವಿಧ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಸಾಮಾನ್ಯವಾಗಿ ಮನೆಗಳಲ್ಲಿ ಇಡುವ ಸಣ್ಣ ವಿಗ್ರಹಗಳಿಗೆ ಮೊಬೈಲ್ ಟ್ಯಾಂಕ್ ಲಭ್ಯವಾಗಲಿದೆ. ಆದರೆ ದೊಡ್ಡ ಮೂರ್ತಿಗಳ ವಿಸರ್ಜನೆಯು ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಅಗರ ಕೆರೆ, ಹೆಬ್ಬಾಳ ಕೆರೆಗಳಲ್ಲಿ ನಡೆಯಲಿದೆ. ವಿಗ್ರಹ ನಿಮಜ್ಜನದ ಸುಗಮ ಮೆರವಣಿಗೆಗಾಗಿ ಕೆಳಗಿನ ಕೆರೆಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ (BBMP) ತಿಳಿಸಿದೆ.

ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶ ಮೂರ್ತಿಯ ವಿಸರ್ಜನೆಯೇ ಬಿಬಿಎಂಪಿ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಇದೇ ಕಾರಣಕ್ಕೆ ವರ್ಷಂಪ್ರತಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುತ್ತಿದೆ. ಆದರೂ ಕೂಡ ನಿಯಂತ್ರಣ ಮಾಡುವುದು ಸಾಧ್ಯವಾಗುತ್ತಿಲ್ಲ. ಇನ್ನು ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಯ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿ ಕರಗದೇ ತ್ಯಾಜ್ಯ ಸಂಸ್ಕರಣೆಯಾಗುತ್ತಿದೆ. ಇದೇ ಕಾರಣಕ್ಕೆ ಬಿಬಿಎಂಪಿ ಹೊಸ ರೂಲ್ಸ್ ಜಾರಿ ಮಾಡಿದೆ.
Ganesh Chaturthi: BBMP imposes strict ban on Plaster of Paris idols in Bengaluru