Heavy rain for 3 days: ರಾಜ್ಯದಲ್ಲಿ 3 ದಿನ ಭಾರೀ ಮಳೆ : ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: (Heavy rain for 3 days) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ.

ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆ(Heavy rain for 3 days)ಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಸಹ ಮಳೆ ಮುಂದುವರೆಯಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : Uniform color for schools: ಶಾಲೆಗಳಿಗೆ ಏಕರೂಪದ ಬಣ್ಣ :8,100 ಶಾಲಾ- ಕಾಲೇಜು ಕೊಠಡಿಗೆ ವಿವೇಕಾನಂದರ ಹೆಸರಿಡಲು ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು ಪ್ರದೇಶಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಗೇ ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ನಿರಂತರ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Yellow alert on the coast: ಕರಾವಳಿಯಲ್ಲಿ ನಾಳೆ ಭಾರೀ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ತುಂತುರು ಮಳೆಯಾಗಲಿದ್ದು, ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ, ಗೋವಾ, ಆಂಧ್ರಪ್ರದೇಶದ ಕರಾವಳಿ ಭಾಗ, ಯಾನಂ, ರಾಯಲಸೀಮಾ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(Heavy rain for 3 days) Heavy rain is likely for 3 days from today in many districts of the state including Bengaluru due to depression in the Bay of Bengal. There is a possibility of moderate rain in many parts of the coast today, and heavy rain in some parts of the northern interior.

Comments are closed.