ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗಯೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ಮನೆಯ ಮೇಲೆ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಜಮೀರ್ ಅಹ್ಮದ್ ಖಾನ್ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಯುಬಿ ಸಿಟಿ ಪ್ಲ್ಯಾಟ್ ಮೇಲೆಯೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರತ್ಯೇಕವಾಗಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಐಟಿ ದಾಳಿಯ ವೇಳೆಯಲ್ಲಿ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿಯೇ ಇದ್ದರೂ ಎಂದು ಹೇಳಲಾಗುತ್ತಿದೆ.
ಸರಕಾರಕ್ಕೆ ಪಾವತಿ ಮಾಡಬೇಕಾದ ತೆರಿಗೆಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುಮಾರು ಎರಡೂವರೆ ಗಂಟೆಗಳಿಂದಲೂ ನಿರಂತರ ವಾಗಿ ಪರಿಶೀಲನೆ ನಡೆಯುತ್ತಿದೆ. ಒಂದೆಡೆಯಲ್ಲಿ ಜಮೀರ್ ತನ್ನ ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ್ದರು. ಇನ್ನೊಂದೆಡೆ ಐಎಂಎ ಬಹುಕೋಟಿ ಹಗರಣದಲ್ಲಿಯೂ ಜಮೀರ್ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.