ಕೊರೊನಾ ಬಿಗ್ ಶಾಕ್ : ಒಂದೇ ಶಾಲೆಯ 38 ವಿದ್ಯಾರ್ಥಿಗಳಿಗೆ ಸೋಂಕು

ಬೆಂಗಳೂರು : ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದೆ. ಇದೀಗ ಒಂದೇ ಶಾಲೆಯ 38 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಕನಕಪುರ ತಾಲೂಕಿನ ಹಾರೋಹಳ್ಳಿ ಹೋಬಳಿಯ ಜಕ್ಕಸಂದ್ರ ಬಳಿಯಿರುವ ಜೈನ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ನಡೆದಿದೆ.

ಜೈನ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಒಟ್ಟು 280 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ‌. ಇದೀಗ ಶಾಲೆಯ 38 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ಸೋಂಕಿಗೆಗಾಗಿರುವ ವಿದ್ಯಾರ್ಥಿಗಳನ್ನು ಐಸೋಲೇಷನ್ ಗೆ ಒಳಪಡಿಸಲಾಗಿದ್ದು, ಸೋಂಕಿತ ವಿದ್ಯಾರ್ಥಿಗಳ ಜೊತೆ ಸಂಕರ್ಪದಲ್ಲಿ ರುವ ವಿದ್ಯಾರ್ಥಿ ಗಳನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಪೋಷಕರು ಹಾಗೂ ಶಿಕ್ಷಕರಿಗೆ ಆತಂಕ ಶುರುವಾಗಿದೆ. ಸ್ಥಳಕ್ಕೆ ಆರೋಗ್ಯಾಧಿಕಾರಿ ಗಳು ಭೇಟಿ ನೀಡಿದ್ದಾರೆ.

Comments are closed.