ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ

ಬೆಂಗಳೂರು : ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ (65 ವರ್ಷ) ಅವರನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.

ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು 10 ದಿನಗಳ ಹಿಂದೆ ನಾರಾಯಣ ಹೃದಯಾಲಯ ದಾಖಲಿಸಲಾಗಿದ್ದು, ಚಿಕಿತ್ಸೆಯನ್ನು  ಪಡೆಯುತ್ತಿದ್ದರು, ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಲಹೆಗಾರರಾಗಿದ್ದ ಅವರು ಪತ್ರಕರ್ತರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿ, ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದಾರೆ.

Comments are closed.