Karnatak Rains : ಕರ್ನಾಟಕದಲ್ಲಿ ‌ನಾಳೆಯಿಂದ ಬಾರೀ ಮಳೆ  ; ಯೆಲ್ಲೋ  ಅಲರ್ಟ್​ ಘೋಷಣೆ

ಬೆಂಗಳೂರು : (Karnatak Rains ) ಬೆಂಗಳೂರಿನಲ್ಲಿ ಕಳೆದ ತಿಂಗಳಿನಲ್ಲಿ ಮಳೆಯ ಅಬ್ಬರ ಜೋರಾಗಿತ್ತು, ಆದರೆ ಕಳೆದ ಕೆಲವು ದಿನಗಳಿಂದ ಮಳೆಯು ಕರ್ನಾಟಕದ ಎಲ್ಲೆಡೆ ಕಡಿಮೆಯಾಗಿತ್ತು . ಇದೀಗ ಮತ್ತೆ ಕರ್ನಾಟಕದಲ್ಲಿ ನಾಳೆಯಿಂದ ಐದು ದಿನಗಳ ಕಾಲ ಬಾರೀ(Karnatak Rains ) ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ  ಕೆಲವು ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ 

ಭಾರತೀಯ ಹವಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ನವೆಂಬರ್‌ 2 ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ(Karnatak Rains ) ಸುರಿಯುವ ಸಾಧ್ಯತೆಗಳಿವೆ . ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು , ಚಿಕ್ಕಮಗಳೂರು , ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ .

ಇದನ್ನೂ ಓದಿ : Karnataka Weather Report : ನ.2 ರಿಂದ ಮತ್ತೆ ವರುಣಾರ್ಭಟ :ಕರ್ನಾಟಕದಲ್ಲಿ Yellow Alert ಘೋಷಣೆ

ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ನವೆಂಬರ್ 2ರಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ನವೆಂಬರ್ 3 ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Parking Policy: ಬೆಂಗಳೂರಿಗರೇ ಗಮನಿಸಿ; ಇನ್ಮುಂದೆ ಬೇಕಾಬಿಟ್ಟಿ ಗಾಡಿ ಪಾರ್ಕ್ ಮಾಡಿದ್ರೆ ಬೀಳುತ್ತೆ ಫೈನ್

ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲೂ ಕೂಡ  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 3 ದಿನಗಳ ಕಾಲ ತಮಿಳುನಾಡಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಣಿಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಮುಂದಿನ 2 ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು , ಈ ಪ್ರದೇಶಗಳಿಗೆ  ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ . 

ಇದನ್ನೂ ಓದಿ : Bangalore Heavy Rain: ರಾತ್ರಿಯಿಡಿ ರಣಭೀಕರ ಮಳೆ.. ಮುಳುಗಿದ ಬೆಂಗಳೂರು.. ಇನ್ನೂ ಇದೇ ಮಳೆ ಅನಾಹುತ

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ಹಾಗೂ ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗಲಿದ್ದು , ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ . ತೆಲಂಗಾಣ, ರಾಯಲಸೀಮಾ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು , ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ಮಾನ್ಸೂನ್  ಪ್ರವೇಶಿಸಿದ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ 4 ದಿನಗಳವರೆಗೆ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.

(Karnatak Rains) Bengaluru had heavy rains in the last month, but for the last few days the rains have been less in all parts of Karnataka. Now the Indian Meteorological Department (IMD) has predicted that it will rain again in Karnataka for five days from tomorrow. In this background, yellow alert has been announced in some districts of the state

Comments are closed.