ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ : ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಬೆಂಗಳೂರು : ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಪಾರ್ಟ್‌ಮೆಂಟ್‌ನ ಎರಡು ಫ್ಲ್ಯಾಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನ ಸಂಪಿಗೆ ನಗರದ ವಸುಂಧರಾ ಲೇಔಟ್‌ನಲ್ಲಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅಪಾರ್ಟ್‌ಮೆಂಟ್‌ನ ಒಂದು ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಮತ್ತೊಂದು ಫ್ಲ್ಯಾಟ್‌ಗೆ ಹಬ್ಬುತ್ತಿದ್ದಂತೆಯೇ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಜನರು ಫ್ಲ್ಯಾಟ್‌ನಿಂದ ಹೊರಗೆ ಬಂದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಶಾರ್ಟ್‌ ಸರ್ಕ್ಯೂಟ್‌ನಿಂದ ದುರಂತ ಸಂಭವಿಸಿರ ಬಹುದು ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡದಿಂದಾಗಿ ಫ್ಲ್ಯಾಟ್‌ನಲ್ಲಿ ಸೊತ್ತುಗಳು ನಾಶವಾಗಿದೆ.

ಇದನ್ನೂ ಓದಿ :‌ ಲೈಸೆನ್ಸ್‌ ಇಲ್ಲದೇ ಇನ್ಮುಂದೆ ಮನೆಯಲ್ಲಿ ನಾಯಿ ಸಾಕುವಂತಿಲ್ಲ; ಕದ್ದು ಮುಚ್ಚಿ ಸಾಕಿದ್ರೆ ಬೀಳುತ್ತೆ ಭಾರೀ ದಂಡ !

ಇದನ್ನೂ ಓದಿ : ಆಶ್ರಿತ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ : ತಾಯಿ, ಮಗಳು ಸಜೀವ ದಹನ

( Fire breaks out at apartment in Bengaluru)

Comments are closed.