ಬೆಂಗಳೂರು : ಕೊರೊನಾ ಆತಂಕ ಮುಗಿಯವ ಮೊದಲೇ ರಾಜ್ಯಕ್ಕೆ ರೂಪಾಂತರಿ ಕೊರೊನಾ ವೈರಸ್ ಸೋಂಕು ಎಂಟ್ರಿಕೊಟ್ಟಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗುತ್ತಿದೆ.
ಕೇಂದ್ರ ಆರೋಗ್ಯ ಇಲಾಖೆ ರೂಪಾಂತರಿ ಕೊರೊನಾ ವೈರಸ್ ಸೋಂಕಿತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬ್ರಿಟನ್ ನಿಂದ ವಾಪಾಸಾಗಿರುವವರ ಪೈಕಿ ಒಟ್ಟು ದೇಶದಲ್ಲಿ 6 ಮಂದಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಬೆಂಗಳೂರಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕ ಮಾತ್ರವಲ್ಲದೇ ಹೈದ್ರಾಬಾದ್ ನ ಇಬ್ಬರು ಹಾಗೂ ಪುಣೆಯ ಓರ್ವ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತವಾಗಿ ಮಾಹಿತಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.