ಬೆಂಗಳೂರು : ಮುಂಬೈನ ಕ್ರೂಸ್‌ನಲ್ಲಿ ನಡೆದಿರುವ ಡ್ರಗ್ಸ್ ಪಾರ್ಟಿ ಪ್ರಕರಣ ಇದೀಗ ಬಾಲಿವುಡ್‌ನಲ್ಲಿ ನಡುಕ ಹುಟ್ಟಿಸಿದೆ. ಎನ್‌ಸಿಬಿ ಅಧಿಕಾರಿಗಳು ಈಗಾಗಲೇ ಮುಂಬೈನಲ್ಲಿ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವಲ್ಲೇ ಮುಂಬೈ ಡ್ರಗ್ಸ್ ಪಾರ್ಟಿಗೆ ಇದೀಗ ಬೆಂಗಳೂರು ಲಿಂಕ್ ಇರೋದು ಬಯಲಾಗಿದೆ.

ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಬಾಗಿಯಾಗಿದ್ದು, ಎನ್‌ಸಿಬಿ ಅಧಿಕಾರಿಗಳು ಗೋವಾಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ದಾಳಿಯನ್ನು ನಡೆಸಿದ್ದರು. ಈ ವೇಳೆಯಲ್ಲಿ ಸೆಲೆಬ್ರಿಟಿಗಳ ಜೊತೆಗೆ ಡ್ರಗ್ಸ್ ಪೆಡ್ಲರ್ಗಳನ್ನೂ ಬಂಧಿಸಲಾಗಿದೆ. ಅಲ್ಲದೇ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಐಶಾರಾಮಿ ಹಡಗಿನಲ್ಲಿ ಸುಮಾರು 1750 ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಈ ಪೈಕಿ ಬೆಂಗಳೂರು ಮೂಲದ 200 ಮಂದಿ ಕ್ರೂಸ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಎನ್‌ಸಿಬಿ ಅಧಿಕಾರಿಗಳು ಈಗಾಗಲೇ ಪಾರ್ಟಿಯಲ್ಲಿ ಭಾಗಿಯಾಗಿದ್ದವರ ಪಟ್ಟಿಯನ್ನು ಸಿದ್ದ ಮಾಡಿಕೊಂಡಿದೆ. ಈ ಪಾರ್ಟಿಯಲ್ಲಿ ಸೆಲೆಬ್ರಿಟಿಗಳ ಮಕ್ಕಳ ಭಾಗಿಯಾಗಿದ್ದಾರಾ ಅನ್ನೋ ಬಗ್ಗೆ ಮಾಹಿತಿಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ವಿಮಾನದ ಮೂಲಕ ಮುಂಬೈಗೆ ತೆರಳಿ, ಅಲ್ಲಿಂದ ಗೋವಾಕ್ಕೆ ಕ್ರೂಸ್ ಮೂಲಕ ತೆರಳಲಾಗುತ್ತಿತ್ತು ಅನ್ನೋ ಮಾಹಿತಿ ಲಭ್ಯವಾಗಿದೆ. ಸ್ಯಾಂಡಲ್‌ವುಡ್ ಡ್ರಗ್ಸ್ ಪಾರ್ಟಿಯ ಬೆನ್ನಲ್ಲೇ ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್ ಪಾರ್ಟಿಗಳಿಗೆ ಬ್ರೇಕ್ ಹಾಕಿದ್ದರು. ಈ ಹಿನ್ನೆಲೆಯಲ್ಲಿಯೇ ಅವರೆಲ್ಲರೂ ಕ್ರೂಸ್ ಪಾರ್ಟಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಶಾರೂಖ್ ಖಾನ್ ಪುತ್ರನಿಗಿಲ್ಲ ಬಿಡುಗಡೆ : ಮತ್ತೆ ಎನ್‌ಸಿಬಿ ಕಸ್ಟಡಿಗೆ ಆರ್ಯನ್ ಖಾನ್

ಬೆಂಗಳೂರಿನಿಂದ ಪಾರ್ಟಿಯಲ್ಲಿ ಭಾಗಿಯಾಗಿದ್ದವರ ಪೈಕಿ ಸೆಲೆಬ್ರಿಟಿಗಳು, ರಾಜಕಾರಣಿಗಳು, ಉದ್ಯಮಿಗಳ ಮಕ್ಕಳು ಮತ್ತು ಟೆಕ್ಕಿಗಳು ಭಾಗಿ ಆಗಿದ್ದಾರಾ ಅನ್ನೋ ಬಗ್ಗೆ ತನಿಖೆ ಜೋರಾಗಿ ನಡೆಯುತ್ತಿದೆ. ಇನ್ನೊಂದೆಡೆಯಲ್ಲಿ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ದಾರಾ ಅಥವಾ ಗೋವಾಕ್ಕೆ ಪ್ರಯಾಣಿಸುತ್ತಿದ್ದರಾ ಅನ್ನೋ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ. ಒಟ್ಟಿನಲ್ಲಿ ಕ್ರೂಸ್‌ನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಹಲವರು ಸಿಕ್ಕಿ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ದೇವರ ಪ್ರಸಾದದ ಹೆಸರಲ್ಲಿ ವಿದೇಶಕ್ಕೆ ಡ್ರಗ್ಸ್ ಸಾಗಾಟ : ಮೂವರ ಬಂಧನ
( Bangalore link to Mumbai cruise drugs party ? )