ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಬೋವಿ ಕಾಲೋನಿಯ ನಿವಾಸಿಯಾಗಿರುವ ಕುಳ್ಳ ವೆಂಕಟೇಶ್ ಎಂಬಾತನೇ ಕೊಲೆಯಾದ ದುರ್ದೈವಿ. ಬೆಂಗಳೂರು ಪೂರ್ವ ವಿಭಾಗದ ಮಾರ್ಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳ ವೆಂಕಟೇಶ್ ಸಂಚರಿಸುತ್ತಿದ್ದ. ಈ ವೇಳೆಯಲ್ಲಿ ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿದ್ದಾರೆ. ಕುಳ್ಳ ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.
ಇದನ್ನೂ ಓದಿ : ಬಾನಲ್ಲೇ ಮಧುಚಂದ್ರಕೆ, ಯುಗಪುರುಷ ಸಿನಿಮಾ ಶೈಲಿಯಲ್ಲಿ ಪತ್ನಿಯ ಕೊಲೆ ಯತ್ನ ! ಕೊನೆಗೆ ಚಾಕುವಿನಿಂದ ಇರಿದು ಕೊಲೆ
ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅವಲಹಳ್ಳಿ ಹಾಗೂ ಕೆ.ಆರ್.ಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಂಧನದ ನಂತರವಷ್ಟೇ ಹತ್ಯೆಯ ಹಿಂದಿನ ಕಾರಣ ತಿಳಿಯಲಿದೆ.
ಇದನ್ನೂ ಓದಿ : ಮಸಾಜ್ ಸೆಂಟರ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ಮಾಲೀಕ ಅರೆಸ್ಟ್
ಇದನ್ನೂ ಓದಿ : ಮೊಬೈಲ್ ಬಳಕೆದಾರರೇ ಎಚ್ಚರ ! ಯಾಮಾರಿದ್ರೆ ಮಾಯವಾಗುತ್ತೆ ನಿಮ್ಮ ಬ್ಯಾಂಕ್ ಡೇಟಾ
( Murder of a man riding a bike Bangalore, 5 Accused Escape )