Karnataka Rains : ಕರ್ನಾಟಕದಲ್ಲಿ 5 ದಿನ ಭಾರೀ ಮಳೆ : ಹೈ ಅಲರ್ಟ್​ ಘೋಷಣೆ

ಬೆಂಗಳೂರು : (Karnataka Rains)ಕರ್ನಾಟಕದ ಬೆಂಗಳೂರು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಬಾರೀ ಮಳೆ ಸುರಿಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆ(Karnataka Rains)ಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ .

ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಆಗಾಗ ಗುಡುಗು – ಮಿಂಚಿನ ಸಹಿತ ಧಾರಾಕಾರ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆಯ ಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಲು ಹವಾಮಾನ ಇಲಾಖೆ(Karnataka Rains) ಮುನ್ನೆಚ್ಚರಿಕೆ ನೀಡಿದೆ. ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು , ತಾಪಮಾನದಲ್ಲಿಯೂ ಕೂಡ ವ್ಯತ್ಯಾಸಗಳಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Bad Weather : ಬೆಂಗಳೂರಲ್ಲಿ ಹೆದಗೆಟ್ಟ ಹವಾಮಾನ : ಶೀತ, ಜ್ವರ, ಕೆಮ್ಮಿಗೆ ತತ್ತರಿಸಿದ ಮಕ್ಕಳು

ಕೆಲವು ಸಮಯಗಳಿಂದ ಬಿಸಿಲಿನ ವಾತಾವರಣವಿದ್ದ ಕರಾವಳಿ ಭಾಗಗಳಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು ,ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು , ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ಮಾನ್ಸೂನ್ ಆಗಮಿಸುತ್ತಿದ್ದಂತೆ ಹವಮಾನ ವೈಪರಿತ್ಯ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 5 ದಿನಗಳವರೆಗೆ ಜನರನ್ನು ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ.

ಇದನ್ನೂ ಓದಿ : Yellow Alert declared : ಕರಾವಳಿಯಲ್ಲಿ ಇಂದಿನಿಂದ ಬಾರೀ ಮಳೆ ; ಯೆಲ್ಲೋ ಅಲರ್ಟ್‌ ಘೋಷಣೆ

ತಮಿಳುನಾಡಿನ ಚೆನ್ನೈ ಸೇರಿದಂತೆ ಹಲವೆಡೆ ಇಂದು ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ ಸೇರಿದಂತೆ ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಚೆನ್ನೈ ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು , ತಿರುವಳ್ಳುವರ್, ಕಾಂಚೀಪುರಂ ಹಾಗೂ ಚೆಂಗಲ್‌ಪಟ್ಟು ಜಿಲ್ಲೆಗಳಲ್ಲೂ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇಂದು ಕರಾವಳಿ ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು , ರಾಯಲಸೀಮಾ, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಕೊಂಕಣ, ಗೋವಾ, ತೆಲಂಗಾಣ ಮತ್ತು ಉತ್ತರ ಕರ್ನಾಟಕದಲ್ಲಿ ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ .

(Karnataka Rains) Bengaluru, North Inland and South Inland districts of Karnataka will receive rain for 5 days from today. Karnataka Rains are likely to occur for another 5 days across the state including Silicon City Bangalore due to surface cyclone in the Bay of Bengal. From today in the hill country, north hinterland, coast, Bangalore part. The Meteorological Department (IMD) has predicted that there will be thundershowers till 6.

Comments are closed.