Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ ; 2 ದಿನ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : (Karnataka Weather)ಕರ್ನಾಟಕದಲ್ಲಿಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ 2 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ವಾರದವರೆಗೆ ಕಡಿಮೆಯಾಗಿದ್ದ ಮಳೆಯ ಅಬ್ಬರ ಇದೀಗ ಮತ್ತೆ ಹೆಚ್ಚಾಗಿದ್ದು , ಇದೀಗ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇನ್ನೆರಡು ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ(Karnataka Weather) ಸಾಧ್ಯತೆಯಿದೆ.

ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 2 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು , ಬೆಂಗಳೂರಿನಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಭಾರೀ ಮಳೆ(Karnataka Weather)ಯಾಗಲಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು , ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಮಳೆ ಮುಂದುವರೆಯಲಿದೆ . ಆದ್ದರಿಂದ ಹವಮಾನ ಇಲಾಖೆ ಜನರಲ್ಲಿ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ : Tracking Device :ವಾಹನ ಸವಾರರ ಗಮನಕ್ಕೆ : ವಾಹನಗಳಲ್ಲಿ ಇನ್ಮುಂದೆ ಟ್ರ್ಯಾಕಿಂಗ್ ಡಿವೈಸ್ ಕಡ್ಡಾಯ

ಇನ್ನೆರಡು ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಬೆಂಗಳೂರು ಭಾಗಗಳಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : Bengaluru Rains : ಕರ್ನಾಟಕದಲ್ಲಿ ಮುಂದುವರಿದ ಮಳೆ : ಕರಾವಳಿ, ಮಲೆನಾಡಲ್ಲಿ ಯೆಲ್ಲೋ ಅಲರ್ಟ್

ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದಿನಿಂದ 2 ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ.

ಕರ್ನಾಟಕದ ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು , ದಕ್ಷಿಣ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಅಸ್ಸಾಂ ಸುತ್ತಲೂ ಮಂಜು ಕವಿಯುವ ಸಾಧ್ಯತೆಯಿದೆ. ಇಂದಿನಿಂದ 2 ದಿನ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಬೀಳುವ ಸಾಧ್ಯತೆಯಿದೆ. ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನವೆಂಬರ್ 6ರವರೆಗೆ ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕಡಲೂರು, ಅರಿಯಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನೀಲಗಿರಿ ಮತ್ತು ಕರೂರ್ ಜಿಲ್ಲೆಗಳಲ್ಲಿ ಕೂಡ ಮಿಂಚು, ಗುಡುಗಿನ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

(Karnataka Weather) There will be heavy rain in Karnataka today and tomorrow, Yellow Alert has been announced for 2 days by the Meteorological Department. The intensity of rain which was low till last week has increased again and now due to the formation of surface cyclone in Bay of Bengal, there is possibility of heavy rain across the state including coast and hill country for the next two days (Karnataka Weather).

Comments are closed.