Karnataka weather report today: ಕರಾವಳಿಯಲ್ಲಿ 4 ದಿನ ಮಳೆ ಮುಂದುವರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Karnataka weather report today) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಡಿಸೆಂಬರ್‌ 19 ರಿಂದ 4 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಒಂದು ವಾರದಿಂದ ಚಂಡಮಾರುತದ ಪ್ರಭಾವದಿಂದ ರಾಜ್ಯದೆಲ್ಲೆಡೆ ಮಳೆಯ (Karnataka weather report today) ಪ್ರಮಾಣ ಹೆಚ್ಚಾಗಿತ್ತು. ಹೀಗಾಗಿ ನಿರಂತರವಾಗಿ ರಾಜ್ಯದಲ್ಲಿ ಮಳೆಯ ಜೊತೆಗೆ ಚಳಿಯ ವಾತಾವರಣವು ಹೆಚ್ಚಾಗಿತ್ತು. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಹಾಸನ, ಮೈಸೂರು, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಈಗಾಗಲೇ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಡಿಸೆಂಬರ್‌ 21 ರಂದು ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗಲಿದ್ದು, ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ?

ಇಂದು ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಯಲ್ಲಿ ಮಳೆ ಮುಂದುವರೆಯಲಿದ್ದು,ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಮತ್ತು ಮಧ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Assault on merchant: ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ: ಹಫ್ತಾ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಹಲ್ಲೆ

ಇದನ್ನೂ ಓದಿ : Mangalore Bomb Blast Case: ಉಗ್ರ ಶಾರೀಖ್‌ ನನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಿದ ಎನ್.ಐ.ಎ

ಇದನ್ನೂ ಓದಿ : Vacuum cleaner: ಬೆಂಗಳೂರಿನ ರಸ್ತೆಗೆ ಹೈಟೈಕ್ ಸ್ಪರ್ಶ: ಕಸಗುಡಿಸಲು ಬರಲಿದೆ ವ್ಯಾಕ್ಯೂಮ್ ಕ್ಲೀನರ್

ಇದನ್ನೂ ಓದಿ : ವರದಕ್ಷಿಣೆ ಕಿರುಕುಳ ಹಾಗೂ ಕಳ್ಳರು ಕದ್ದ ಬಂಗಾರ ಖರೀದಿ ಆರೋಪ: ಅಟ್ಟಿಕಾ ಗೋಲ್ಡ್‌ ಕಂಪನಿಯ ಮಾಲಿಕ ಬಾಬು ಅರೆಸ್ಟ್‌

(Karnataka weather report today) In the backdrop of depression in the Bay of Bengal, the Meteorological Department has forecast rain for 4 days from December 19 in the southern interior and coastal districts of the state.

Comments are closed.