ಬೆಂಗಳೂರು : ಎಲ್‌ಪಿಜಿ ಸಿಲಿಂಡರ್ ಬ್ಲಾಸ್ಟ್ ಆಗಿ ಇಬ್ಬರು ಸಜೀವವಾಗಿ ದಹನವಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಮನೆಯೊಂದರಲ್ಲಿ ನಡೆದಿದೆ.
ಇಲ್ಲಿನ ಮಾಗಡಿ ರಸ್ತೆಯ ಆಂಜನೇಯ ಥಿಯೇಟರ್ ಬಳಿಯಲ್ಲಿರುವ ಎಂ.ಎಂ.ಪುಡ್ ಪ್ಯಾಕ್ಟರಿ ಬಳಿಯಲ್ಲಿ ಆರು ಮಂದಿ ಕೆಲಸ ಮಾಡುತ್ತಿದ್ದರು. ಈ ವೇಳೆಯಲ್ಲಿ ಫ್ಯಾಕ್ಟರಿಯಲ್ಲಿ ಬಾಯ್ಲರ್ ಬ್ಲಾಸ್ಟ್ ಆಗಿದೆ. ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸೋ ಕಾರ್ಯವನ್ನು ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ನಾಲ್ವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ : ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ : ಹೊತ್ತಿ ಉರಿದ ಮನೆ
ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸಿಲಿಕಾನ್ ಸಿಟಿಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಸಿಲಿಂಡರ್ ಸ್ಪೋಟಗೊಂಡು ದಂಪತಿ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ಸಂಭವಿಸಿದೆ.
ಇದನ್ನೂ ಓದಿ : ಈ ನಂಬರ್‌ಗೆ ಮಿಸ್‌ಕಾಲ್ ಕೊಟ್ರೆ ಮನೆ ಬಾಗಿಲಿಗೆ ಬರುತ್ತೆ ಗ್ಯಾಸ್