ಸೋಮವಾರ, ಏಪ್ರಿಲ್ 28, 2025
HomekarnatakaMuslim Girls College: ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಇಲ್ಲ: ಶಶಿಕಲಾ ಜೊಲ್ಲೆ ಸ್ಪಷ್ಟನೆ

Muslim Girls College: ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಇಲ್ಲ: ಶಶಿಕಲಾ ಜೊಲ್ಲೆ ಸ್ಪಷ್ಟನೆ

- Advertisement -

ಬೆಂಗಳೂರು: (Muslim Girls College) ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆಯ ಪ್ರಸ್ತಾಪದ ಬಗ್ಗೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದು, ಸರ್ಕಾರದಿಂದ ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜು ಪ್ರಾರಂಭ ಮಾಡುವ ಯಾವುದೇ ಪ್ರಸ್ತಾವನೆ ನಡೆದಿಲ್ಲ ಎಂದು ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕವಾಗಿ ಮುಸ್ಲಿಂ ಯುವತಿಯರಿಗೆ ಹತ್ತು ಮುಸ್ಲಿಂ ಕಾಲೇಜು (Muslim Girls College) ಸ್ಥಾಪನೆ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಕಾಲೇಜು ಸ್ಥಾಪನೆ ಮಡುತ್ತೇವೆ ಎಂದು ಹೇಳಿಕೆ ನೀಡಿದ್ದ ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಾಫಿ ಸಅದಿ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕುರಿತು ಶಶಿಕಲಾ ಜೊಲ್ಲೆ ಅವರು ಸ್ಪಷ್ಟನೆಯನ್ನು ನೀಡಿದ್ದು, ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವುದಿಲ್ಲ. ಮುಸ್ಲಿಂ ಹುಡುಗಿಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಇದು ಸರ್ಕಾರದ ಮುಂದೆ ಕಡತವೂ ಅಲ್ಲ ಎಂದು ಮಾಧ್ಯಮದ ಎದುರಿಗೆ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ ಎನ್ನುವುದು ಸತ್ಯಕ್ಕೆ ತುಂಬಾ ದೂರದ ವಿಷಯ. ಇದು ವಕ್ಫ್‌ ಬೋರ್ಡ್‌ ಅಧ್ಯಕ್ಷರ ವೈಯಕ್ತಿಕ ಹೇಳಿಕೆ. ನಾನು ಅವರೊಂದಿಗೆ ಮಾತನಾಡಿದ್ದೇನೆ. ಮುಸ್ಲಿಂ ಹುಡುಗಿಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭದ ಕುರಿತು ಆಗುತ್ತಿರುವ ವಿವಾದಕ್ಕೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದೇನೆ ಎಂದು ಶಶಿಕಲಾ ಜೊಲ್ಲೆ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ : The leopard: ಬೆಂಗಳೂರಲ್ಲಿ ಚಿರತೆ ಕಾಟ :ಶಾಲೆಗೆ ತೆರಳಲು ಮಕ್ಕಳಿಗೆ ಆತಂಕ

ಇದನ್ನೂ ಓದಿ : MBBS students: ರಾಜೀವ್‌ ಗಾಂಧಿ ವಿವಿ ಕುಲಸಚಿವರ ನಿರ್ಲಕ್ಷ್ಯ: ಹೈಕೋರ್ಟ್‌ ಮೆಟ್ಟಿಲೇರಿದ MBBS ವಿದ್ಯಾರ್ಥಿಗಳು

ಇದನ್ನೂ ಓದಿ : Rape by bus driver: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಬಸ್ ಚಾಲಕನಿಂದ ಅತ್ಯಾಚಾರ

ಏನಿದು ಸುದ್ದಿ..?
ರಾಜ್ಯದಲ್ಲಿ ಮುಸ್ಲಿಂ ಯುವತಿಯರಿಗೆಂದೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಕ್ಫ್ ಬೋರ್ಡ್ ಸರ್ಕಾರ ನೀಡುವ ಅನುದಾನದಲ್ಲಿ ಪ್ರತಿ ಕಾಲೇಜಿಗೆ 2.5 ಕೋಟಿ ರೂ. ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ. ವಕ್ಫ್ ಬೋರ್ಡ್ ಮೂಲಕ ರಾಜ್ಯದ ಹಲವೆಡೆಗಳಲ್ಲಿ ಮುಸ್ಲಿಂ ಯುವತಿಯರಿಗೆಂದೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮುಸ್ಲಿಂರಿಗೆಂದೇ ಮಹಿಳಾ ಕಾಲೇಜು ಆರಂಭಿಸುವ ಬಗ್ಗೆ ಸಿಎಂ ಬಳಿ ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನೆಲೆ ಸಿಎಂ ಅವರು ಅತಿ ಶೀಘ್ರದಲ್ಲೇ ರಾಜ್ಯದಲ್ಲಿ ಪ್ರಥಮ ಮುಸ್ಲಿಂ ಯುವತಿಯರ ಕಾಲೇಜಿಗೆ ಚಾಲನೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು.

(Muslim Girls College) Sasikala Jolla has responded to the proposal of establishing a separate college for Muslim girls, which has caused a lot of discussion in the state. Minorities and Waqf Minister Sasikala Jolla has clarified that there has been no proposal to start a separate Muslim college from the government.

RELATED ARTICLES

Most Popular