ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ, ಕೇಂದ್ರ ಸರಕಾರ ಎಂದ ಸಿಎಂ ಸಿದ್ದರಾಮಯ್ಯ

Namma Metro ticket Price : ಬೆಂಗಳೂರು : ಸಿಲಿಕಾನ್‌ ಸಿಟಿ ಜನರ ಜೀವನಾಡಿಯಾಗಿರುವ ಮೆಟ್ರೋ ಟಿಕೆಟ್​ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಭಾರೀ ವಿವಾದ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಕೂಡ ರಾಜ್ಯ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೌನ ಮುರಿದಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಠಣೆ ಹೊರಡಿಸಿರುವ ಅವರು, ಮೆಟ್ರೋ ಟಿಕೆಟ್​ ದರ ಏರಿಕೆ ಮಾಡಿರುವುದು ನಾವಲ್ಲ. ಕೇಂದ್ರ ಸರ್ಕಾರ ಎಂದು ಸ್ಪಷ್ಟನೆ ನೀಡಿದ್ದಾರೆ. ಮೆಟ್ರೋ ದರ ಏರಿಕೆಯ ವಿಚಾರದಲ್ಲಿ ಪ್ರಯಾಣಿಕರಿಗೆ ಆಗಿರುವ ಆತಂಕವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ.

ಆದರೆ ರಾಜಕೀಯ ಕೆಸರೆರೆಚಾಟಕ್ಕಿಂತ ಜನರಿಗೆ ಸರಿಯಾದ ಮಾಹಿತಿ ನೀಡುವುದು ಮುಖ್ಯ. ಮೆಟ್ರೋ ಟಿಕೆಟ್​ ಪ್ರಯಾಣದ ದರವನ್ನು ಎಂದಿಗೂ ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ಅದನ್ನು ನಿರ್ಧರಿಸುವುದು ಕೇಂದ್ರ ಸರ್ಕಾರ. ಆದರೆ ಇದನ್ನು ಮರೆಮಾಚಿ ಸ್ವಾರ್ಥ ರಾಜಕಾರಣ ಮಾಡುತ್ತಿರುವ ರಾಜ್ಯ ಬಿಜೆಪಿ ನಾಯಕರು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡ್ತಿದ್ದಾರೆ.

ಇದನ್ನೂ ಓದಿ : 15 ವರ್ಷಗಳ ಬಳಿಕ ರಾಜ್ಯ ರಾಜಧಾನಿಯಲ್ಲಿ ಕಡಿಮೆ ತಾಪಮಾನ : ದಾಖಲೆಯ ಚಳಿ ದಾಖಲಿಸಿದ ಬೆಂಗಳೂರು

ಪದೇ ಪದೇ ಮೆಟ್ರೋ ಟಿಕೆಟ್​ ಪ್ರಯಾಣ ದರ ಏರಿಕೆಯಾಗುತ್ತಿರುವುದು ದಿನನಿತ್ಯ ಮೆಟ್ರೋದಲ್ಲಿ ಸಂಚರಿಸುವವರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಬಹಳವೇ ಕಷ್ಟ. ಈ ಬಗ್ಗೆ ನಾನು ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಮಾತನಾಡಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ತಪ್ಪನ್ನು ನಮ್ಮ ಸರ್ಕಾರದ ಮೇಲೆ ಹೇರುವ ಪ್ರಯತ್ನ ಮಾಡಲಾಗುತ್ತಿದೆ.

ಇದನ್ನೂ ಓದಿ : ಪಾರ್ಕಿಂಗ್ ಶುಲ್ಕ ಹೆಚ್ಚಿಸಿದ ಬೆಂಗಳೂರು ಏರ್​ಪೋರ್ಟ್, ಮತ್ತೆ ಟ್ಯಾಕ್ಸಿ ಚಾಲಕರಿಂದ ವಿರೋಧ!

ಕೇಂದ್ರ ಸರ್ಕಾರವೇ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯ ಸಮಿತಿ ಸಲ್ಲಿಸಿದ್ದ ವರದಿ ಆಧರಿಸಿ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಲಾಗಿದೆ. ಆದರೆ ಇದನ್ನು ಮರೆಮಾಚುವ ಯತ್ನವನ್ನು ರಾಜ್ಯ ಬಿಜೆಪಿ ನಾಯಕರು ಮಾಡಿದ್ದಾರೆ ಎಂದು ವಿಧಾನಸೌಧದ ಆವರಣದಲ್ಲಿ ಕಿಡಿಕಾರಿದ್ದಾರೆ.

Namma Metro ticket Price increased Central Government says CM Siddaramaiah

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories