ಬೆಂಗಳೂರು : ನಿರ್ಭಯಾ ಅತ್ಯಾಚಾರ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅಂತಹದ್ದೇ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದಿದೆ. ಯುವತಿಯೋರ್ವಳನ್ನು ಅತ್ಯಾಚಾರಗೈದ ಕಾಮುಕರು ಗುಪ್ತಾಂಗಕ್ಕೆ ಮದ್ಯದ ಬಾಟಲಿ ಇರಿಸಿ ವಿಕೃತಿ ಮೆರೆದಿದ್ದಾರೆ.
ಬೆಂಗಳೂರಿನ ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿ ಕಾಮುಕರ ಜೊತೆಗೆ ನೆಲೆಸಿದ್ದಳು. ಯುವತಿಯನ್ನು ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು, ಹಕೀಲ್ ಎಂಬವರೇ ಅತ್ಯಾಚಾರ ಗೈದಿದ್ದಾರೆ. ಕಾಮುಕರಿಗೆ ಜೊತೆಗೆ ವಾಸವಿದ್ದ ಇಬ್ಬರು ಯುವತಿಯರು ಕೂಡ ಸಾಥ್ ಕೊಟ್ಟಿದ್ದು, ಕಾಮುಕರು ಸೇರಿದಂತೆ ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಂಗ್ಲಾ ಮೂದಲವರಾಗಿದ್ದು, ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ತಿಳಿದುಬಂದಿದ್ದಾರೆ.
ಯುವತಿಯ ಮೇಲಿದ್ದ ದ್ವೇಷದ ಹಿನ್ನೆಲೆಯಲ್ಲಿ ಯುವತಿಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ನಂತರ ಯುವತಿಯ ಗುಪ್ತಾಂಗಕ್ಕೆ ಬಾಟಲಿ ಸಿಲುಕಿಸಿದ್ದಾಳೆ. ಪೈಶಾಚಿಕ ಕೃತ್ಯವನ್ನು ಕಾಮುಕರು ವಿಡಿಯೋ ಮಾಡಿದ್ದರು. ಈ ವಿಡಿಯೋ ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಸ್ಸಾಂ ಪೊಲೀಸರು ಅಲರ್ಟ್ ಆಗಿ ತನಿಖೆಗೆ ಇಳಿದಿದ್ದಾರೆ. ಅಲ್ಲದೇ ವಿಡಿಯೋದಲ್ಲಿರುವ ಕಾಮುಕರು ಬಾಂಗ್ಲಾ ಪ್ರಜೆಗಳು ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಬಾಂಗ್ಲಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಬಾಂಗ್ಲಾ ಪೊಲೀಸರು ಸಂತ್ರಸ್ತೆಯನ್ನು ಪತ್ತೆ ಹಚ್ಚಿದ್ದಾರೆ. ಈ ವೇಳೆಯಲ್ಲಿ ಘಟನೆ ಬೆಂಗಳೂರಲ್ಲಿ ನಡೆದಿದೆ ಅನ್ನೋದು ತಿಳಿದುಬಂದಿದೆ. ಬೆಂಗಳೂರಿನ ಅವಲಳ್ಳಿಯಲ್ಲಿ ತಲೆ ಮರೆಯಿಸಿಕೊಂಡಿದ್ದ 4 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಅಲ್ಲದೇ ಆರೋಪಿಗಳು ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.