PM Modi to Bangalore : ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ವಂದೇ ಭಾರತ್ ರೈಲಿಗೆ ಚಾಲನೆ, ಕನಕದಾಸ ಪುತ್ಥಳಿಗೆ ಪುಷ್ಪಾರ್ಚನೆ

ಬೆಂಗಳೂರು : (PM Modi to Bangalore)ನಾಡಪ್ರಭು ಕೆಂಪೇಗೌಡರ ನೂರ ಎಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಕನಕದಾಸ ಪ್ರತಿಮೆಗೆ ಹಾಗೂ ಮಹರ್ಷಿ ವಾಲ್ಮಿಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರದಲ್ಲಿ ಅವರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ(PM Modi to Bangalore) ಹಿನ್ನಲೆಯಲ್ಲಿ ವಿಶೇಷ ಭದ್ರತೆ ಕೈಗೊಳ್ಳಲಾಗಿದ್ದು, ಸಂಚಾರ ವ್ಯವಸ್ಥೆಯಲ್ಲಿ ಕೂಡ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ . ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ವಿಧಾನಸೌದ ಶಾಸಕರ ಭವನಕ್ಕೆ ಆಗಮಿಸಿದ್ದು , ಶಾಸಕರ ಭವನದಲ್ಲಿರುವ ಸಂತ ಶ್ರೇಷ್ಠ ಕನಕದಾಸ ಹಾಗೂ ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದ್ದಾರೆ.

ಅದಾದ ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಗಳು ವಂದೇ ಮಾತರಂ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ .ಇದಾದ ಬಳಿಕ ರೈಲು ನಿಲ್ದಾಣದಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು , ಅಲ್ಲಿ ವಿಮಾನ ನಿಲ್ದಾಣದ ಸೆಕೆಂಡ್‌ ಟರ್ಮಿನಲ್‌ ಅನ್ನು ಉದ್ಘಾಟಿಸಲಿದ್ದಾರೆ. ನಂತರ ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ ನೂರ ಎಂಟು ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇದಾದ ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಲಿದ್ದಾರೆ.

ಇದನ್ನೂ ಓದಿ : Bengaluru Airport : ಮನಸೆಳೆಯುವ ಟರ್ಮಿನಲ್-2 ಗೆ ಮೋದಿ ಚಾಲನೆ: ಗಮನ ಸೆಳೆಯುತ್ತಿದೆ ಕೆಂಪೇಗೌಡ ಏರ್ಪೋರ್ಟ್

ಇದನ್ನೂ ಓದಿ : Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ ; ಇಂದೂ ಕೂಡ ಯೆಲ್ಲೋ ಅಲರ್ಟ್‌

ಸಾರ್ವಜನಿಕ ಸಭೆಗಳಲ್ಲಿ ಲಕ್ಷಾಂತರ ಜನ ಭಾಗಿಯಾಗಲಿದ್ದು, ಎಲ್ಲ ರೀತಿಯ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಕಾರ್ಯಕ್ರಮಗಳ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೋಲೀಸರನ್ನು ನಿಯೋಜಿಸಲಾಗಿದೆ. ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಮೋದಿ ಅವರು ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಇಂದು ನಗರದಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಪ್ರಧಾನಿಗಳು ಪಾಲ್ಗೊಳ್ಳುವ ವಿಮಾನ ನಿಲ್ದಾಣ, ವಿಧಾನ ಸೌಧ, ರೈಲ್ವೇ ನಿಲ್ದಾಣ ಗಳಲ್ಲಿ ಮುಂಜಾನೆಯಿಂದಲೆ ಭದ್ರತೆಗಳನ್ನು ಬಿಗಿಗೊಳಿಸಲಾಗಿದೆ.

ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಗರದಾದ್ಯಂತ ಭಾರೀ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಅವರು ಸಂಚರಿಸುವ ರಸ್ತೆ ಮಾರ್ಗಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಭಂಧಗಳನ್ನು ವಿಧಿಸಲಾಗಿದೆ. ಅಲ್ಲದೆ, ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಹ ಬಂದ್‌ ಮಾಡಲಾಗಿದೆ. ಪ್ರಧಾನಿಗಳು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ನಗರ ನಿಲ್ದಾಣಕ್ಕೆ ಬರಬೇಕಿದ್ದ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ

(PM Modi to Bangalore) Prime Minister Narendra Modi has arrived in Bangalore to participate in various programs including the unveiling of a one hundred and eight feet tall statue of Nadaprabhu Kempegowda. After garlanding the statue of Kanakadasa and Maharshi Valmiki, he flagged off the Vande Bharat train.

Comments are closed.