Protest by transport workers: ವೇತನ ಹೆಚ್ಚಳಕ್ಕೆ ಆಗ್ರಹ: ಸಾರಿಗೆ ನೌಕರರಿಂದ ಬೃಹತ್‌ ಪ್ರತಿಭಟನೆ, ಸೋಮವಾರ ಬಸ್‌ ಸಂಚಾರ ವ್ಯತ್ಯಯ ಸಾಧ್ಯತೆ

ಬೆಂಗಳೂರು: (Protest by transport workers) ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಮುಷ್ಕರ ನಡೆಸಿದ್ದರೂ, ನೌಕರರ ಬೇಡಿಕೆಗೆ ಮೀನಾಮೇಷ ಎಣಿಸುತ್ತಿರುವ ಸರಕಾರದ ವಿರುದ್ದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಾರಿಗೆ ನೌಕರರು ಬೃಹತ್‌ ಧರಣಿ ಸತ್ಯಾಗ್ರಹ ನಡೆಸಲಿದ್ದು, ರಾಜ್ಯಾದ್ಯಂತ ಒಂದು ದಿನ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಕಳೆದ ಆರು ವರ್ಷದಿಂದ ಸಾರಿಗೆ ನೌಕರರ ವೇತನದಲ್ಲಿ ಹೆಚ್ಚಳವಾಗಿಲ್ಲ. ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ 2021 ರ ಏಪ್ರಿಲ್‌ ನಲ್ಲಿ ಹದಿನೈದು ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೂ ನೌಕರರ ಬೇಡಿಕೆ ಈಡೇರಿಸಲು ಸರಕಾರ ಮೀನಾಮೇಷ ಎಣಿಸುತ್ತಿದೆ. ಈ ಹಿನ್ನಲೆಯಲ್ಲಿ ಸರಕಾರದ ವಿರುದ್ದ ರಾಜ್ಯ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಜೊತೆಗೆ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದು, ಜ. 24 ರಂದು ಬೃಹತ್‌ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳವಾರ ರಾಜ್ಯಾದ್ಯಂತ ಬಸ್‌ ಸಂಚಾರ ವ್ಯತ್ಯಯವಾಗಲಿದೆ.

ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದು, ಕಳೆದ ಆರು ವರ್ಷಗಳಿಂದ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ. ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್‌ ಆರ್‌ ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಪ್ರತಿಭಟನೆಗೆ ಕೆಎಸ್‌ ಆರ್‌ ಟಿಸಿ ಸಿಬ್ಬಂದಿಗಳು ಹಾಗೂ ವರ್ಕರ್ಸ್‌ ಫೆಡರೇಷನ್‌, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಯುನೈಟೆಡ್‌ ಎಂಪ್ಲಾಯಿಸ್‌ ಯೂನಿಯನ್‌, ಹಾಗೂ ಇತರೆ ಸಂಘಗಳು, ಅಧಿಕಾರಿಗಳು ಧರಣಿ ಸತ್ಯಾಗ್ರಹಕ್ಕೆ ಬೆಂಬಲವನ್ನು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ : Road crash in bengaluru: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಮತ್ತೊಂದು ಸಾಕ್ಷಿ : ಬೆಂಗಳೂರಲ್ಲಿ ಕುಸಿಯಿತು ರಸ್ತೆ

ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್‌ ನೇತ್ರತ್ವದಲ್ಲಿ ಸತ್ಯಾಗ್ರಹ ನಡೆಯಲಿದ್ದು, ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್‌ ನಲ್ಲಿ ಸತ್ಯಾಗ್ರಹ ನಡೆಸಲಿದ್ದು, ನೌಕರರು ಧರಣಿಯಾಲ್ಲಿ ಭಾಗಿಯಾಗುತ್ತಿರುವ ಹಿನ್ನಲೆಯಲ್ಲಿ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Protest by transport workers: Demand for salary increase: Massive protest by transport workers, possibility of disruption of bus traffic on Monday

Comments are closed.